Result ; ಜೂ. 12 ಅಥವಾ 14ಕ್ಕೆ ಸಿಇಟಿ ಫಲಿತಾಂಶ?
Team Udayavani, Jun 6, 2023, 7:08 AM IST
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ ತಿಂಗಳಲ್ಲಿ ನಡೆಸಿದ್ದ ಸಿಇಟಿಯ ಫಲಿತಾಂಶ ಜೂನ್ 12 ಅಥವಾ 14ರಂದು ಪ್ರಕಟವಾಗುವ ಸಾಧ್ಯತೆ ಇದೆ.
ಸಿಇಟಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಪ್ರಸ್ತುತ ಸಿಇಟಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನೂ ಆಧರಿಸಿ ರ್ಯಾಂಕ್ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.
ಕೆಲವೇ ದಿನಗಳಲ್ಲಿ ರ್ಯಾಂಕ್ ಪಟ್ಟಿ ಸಿದ್ಧವಾಗಲಿದೆ. ಹಾಗಾಗಿ ಜೂ. 12 ಅಥವಾ 14ರಂದು ಫಲಿತಾಂಶ ಪ್ರಕಟಿಸಲು ಚರ್ಚೆ ನಡೆದಿದೆ.
ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಶೀಘ್ರ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.