ಮನ್ಸೂರ್ ಖಾನ್‌ಗೆ ನ್ಯಾಯಾಂಗ ಬಂಧನ
Team Udayavani, Sep 25, 2019, 3:00 AM IST
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಹಾಗೂ ಆತನ ಆಪ್ತ ನವೀದ್ ಅಹ್ಮದ್‌ನನ್ನು ಮತ್ತೂಮ್ಮೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಸೆ.12ರಂದು ಮನ್ಸೂರ್ ಖಾನ್, ಆತನ ಆಪ್ತ ನವೀದ್ ಅಹ್ಮದ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು. ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸೆಷನ್ಸ್ ಕೋರ್ಟ್ ಆವರಣದ ಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಇಬ್ಬರು ಆರೋಪಿಗಳನ್ನು ಹಾಜರು ಪಡಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಆ.30ರಂದು ಎಫ್ಐಆರ್ ದಾಖಲು ಮಾಡಿಕೊಂಡ ಸಿಬಿಐ ಅಧಿಕಾರಿಗಳು, ಈ ಮೊದಲು ತನಿಖೆ ಕೈಗೊಂಡಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ಸಾಕಷ್ಟು ಮಾಹಿತಿ ಪಡೆದುಕೊಂಡರು. ಅನಂತರ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳನ್ನು ಸೆ.12ರಂದು ಮನ್ಸೂರ್ ಖಾನ್, ನವೀದ್ ಅಹ್ಮದ್ ಹಾಗೂ ಬಿಡಿಎ ಅಧಿಕಾರಿ ಪಿ.ಡಿ.ಕುಮಾರ್ ಸೇರಿ ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ