ಜುಲೈ 21ರಂದು ರಾಜ್ಯಾದ್ಯಂತ ಶಾಲಾ, ಕಾಲೇಜು ಬಂದ್

Team Udayavani, Jul 16, 2018, 10:38 AM IST

ಬೆಂಗಳೂರು: ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಜುಲೈ21ರಂದು ರಾಜ್ಯಾದ್ಯಂತ ಎಲ್ಲಾ ಶಾಲಾ, ಕಾಲೇಜು ಬಂದ್ ಗೆ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿವೆ.

ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ಬಂದ್ ನಡೆಸಲು ನಿರ್ಧರಿಸಿರುವುದಾಗಿ ವಿದ್ಯಾರ್ಥಿ ಸಂಘಟನೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಜುಲೈ 21ರಂದು ಶಾಲಾ, ಕಾಲೇಜು ಬಂದ್ ಗೆ ಸಹಕರಿಸಬೇಕಾಗಿ ವಿನಂತಿಸಿಕೊಂಡಿವೆ.

ರಾಜ್ಯ ವಿಧಾನಸಭಾ ಚುನಾವಣೆಯ ಜೆಡಿಎಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದರು. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ಯಾವುದೇ ಬಜೆಟ್ ಮೀಸಲಿಟ್ಟಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ