“ಭೂಮಿ, ವಸತಿ ಹಕ್ಕು ವಂಚಿತರಿಗೆ ನ್ಯಾಯ ಕಲ್ಪಿಸಿಕೊಡಿ’
Team Udayavani, Aug 29, 2019, 3:02 AM IST
ಬೆಂಗಳೂರು: ವಾಸಿಸಲು ಮನೆ ಹಾಗೂ ಕೃಷಿ ಮಾಡಲು ಭೂಮಿ ಇಲ್ಲದವರಿಗೆ ಸರ್ಕಾರದ ವತಿಯಿಂದ ಮನೆ ಹಾಗೂ ಜಮೀನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸ್ವಾತಂತ್ರ್ಯಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.
ಬುಧವಾರ ಭೂಮಿ ಹಾಗೂ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನಿಯೋಗದೊಂದಿಗೆ ಭೇಟಿ ಮಾಡಿದ ಅವರು, ರಾಜ್ಯದಲ್ಲಿ ಭೂಮಿ ಹಾಗೂ ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದೆ ಲಕ್ಷಾಂತರ ಮಂದಿ ಭೂ ವಂಚಿತರಾಗಿದ್ದಾರೆ.
ಹೀಗಾಗಿ, ಈ ಬಗ್ಗೆ ಗಮನ ಹರಿಸಬೇಕು ಎಂದು ಕೋರಿದರು. ನಿಯೋಗದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಮುಖ್ಯಮಂತ್ರಿಯವರ ಸಲಹೆಗಾರ ಎಂ.ಲಕ್ಷ್ಮಿನಾರಾಯಣ, ಕಾರ್ಯದರ್ಶಿ ಶಿವಯೋಗಿ ಸಿ.ಕಳಸದ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!