ಕನ್ನಡಿಗ v/s ಕನ್ನಡಿಗ; ವಾಟಾಳ್ ಗೆ ಕರ್ನಾಟಕವನ್ನು ಬರೆದುಕೊಟ್ಟಿಲ್ಲ!

Team Udayavani, Jun 12, 2017, 10:42 AM IST

vatal1.jpg

ಬೆಂಗಳೂರು: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿ, ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ವಿಫಲವಾಗಿದೆ. ಕನ್ನಡ ಪರ ಸಂಘಟನೆಗಳ ಮುಖಂಡರ ನಡುವಿನ ಸ್ವಪ್ರತಿಷ್ಠೆಯಿಂದಾಗಿ ಒಗ್ಗಟ್ಟು ಮುರಿದು ಹೋದಂತಾಗಿದೆ. ಮತ್ತೊಂದೆಡೆ ಕನ್ನಡ ಪರ ಸಂಘಟನೆಗಳಿಗೆ ಬಂದ್ ಗೆ ಅನುಮತಿ ನೀಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಾಟಾಳ್ ನಾಗರಾಜ್ ವಿರುದ್ಧವೇ ಪ್ರತಿಭಟನೆ:
ಏಕಾಏಕಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ವಿರುದ್ಧವೇ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಂಗಳೂರಿನಲ್ಲಿ ನಡೆಯಿತು. ಸುಮ್ಮನಹಳ್ಳಿ ಸೇತುವೆ ಸಮೀಪ ವಾಟಾಳ್ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ ನಡೆಯಿತು. 

ಕರ್ನಾಟಕವನ್ನು ವಾಟಾಳ್ ನಾಗರಾಜ್ ಗೆ ಬರೆದುಕೊಟ್ಟಿಲ್ಲ; ನಾರಾಯಣ ಗೌಡ
ಕರ್ನಾಟಕ ರಾಜ್ಯವನ್ನು ವಾಟಾಳ್ ನಾಗರಾಜ್ ಅವರಿಗೆ ಬರೆದುಕೊಟ್ಟಿಲ್ಲ. ಪದೇ, ಪದೇ ರಾಜ್ಯ ಬಂದ್ ನಡೆಸುವುದರಿಂದ ಯಾರಿಗೆ ಲಾಭವಿದೆ. ಕನ್ನಡಪರ ಸಂಘಟನೆಗಳು ಸಚಿವರು, ಶಾಸಕರು, ಸಚಿವರ ಮನೆ ಎದುರು ಪ್ರತಿಭಟನೆ ನಡೆಸಬೇಕು. ಅದನ್ನು ಬಿಟ್ಟು ನಾನು ಹೇಳಿದ್ದೇ ಅಂತಿಮ ಎನ್ನುವವರಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಖಾಸಗಿ ಟಿವಿ ಚಾನೆಲ್ ವೊಂದಕ್ಕೆ ನೀಡಿದ್ದ ಪ್ರತಿಕ್ರಿಯೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

ಬಂದ್ ವಿಫಲವಾಗಿಲ್ಲ; ಪ್ರವೀಣ್ ಶೆಟ್ಟಿ
ಕನ್ನಡ ಪರ ಸಂಘಟನೆಗಳ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗಾಗಿ ಕರ್ನಾಟಕ ಬಂದ್ ವಿಫಲವಾಗಿಲ್ಲ. ನಾರಾಯಣ ಗೌಡರು ಸ್ವಪ್ರತಿಷ್ಠೆಯನ್ನು ಬಿಡಬೇಕಾಗಿತ್ತು. ಬಂದ್ ವಿಫಲಗೊಳಿಸಲು ಪಿತೂರಿ ನಡೆಸಿದವರ ಹೆಸರನ್ನು ಶೀಘ್ರವೇ ಬಹಿರಂಗಗೊಳಿಸುತ್ತೇವೆ ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿರುಗೇಟು ನೀಡಿದ್ದಾರೆ.

ಟೌನ್ ಹಾಲ್ ಬಳಿ ಕರವೇ ಮುಖಂಡರ ಸುಳಿವೇ ಇಲ್ಲ!
ಅನುಮತಿಯ ಹೊರತಾಗಿಯೂ ಕರ್ನಾಟಕ ಬಂದ್ ಗೆ ಕರೆ ಕೊಟ್ಟು ಬಂದ್ ವಿಫಲವಾದ ಹಿನ್ನೆಲೆಯಲ್ಲಿ ಬೆಳಗ್ಗೆ 10ಗಂಟೆಗೆ ಟೌನ್ ಹಾಲ್ ಬಳಿ ಧರಣಿ ನಡೆಸುವುದಾಗಿ ತಿಳಿಸಿದ್ದ ಕನ್ನಡಪರ ಸಂಘಟನೆಯ ಮುಖಂಡರಾದ ವಾಟಾಳ್ ನಾಗರಾಜ್, ಸಾರಾ ಗೋವಿಂದು, ಪ್ರವೀಣ್ ಶೆಟ್ಟಿಯಾಗಲಿ ಯಾರೂ ಬಂದಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.