ದ್ವಿತೀಯ ಪಿಯುಸಿ : ಪಿಸಿಎಂಬಿ ಪಠ್ಯಪುಸ್ತಕ ಕನ್ನಡ ಅವತರಣಿಕೆ ಲಭ್ಯ
Team Udayavani, Aug 24, 2020, 11:27 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪಿಸಿಎಂಬಿ (ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಹಾಗೂ ಜೀವಶಾಸ್ತ್ರ) ಪಠ್ಯ ಪುಸ್ತಕಗಳು ಕನ್ನಡ ಅವತರಣಿಕೆಯಲ್ಲೇ ಲಭ್ಯವಾಗಲಿವೆ.
ಪ್ರಸ್ತುತ ಪದವಿಪೂರ್ವ ಶಿಕ್ಷಣದ ವಿಜ್ಞಾನ ವಿಭಾಗದಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ಪಿಸಿಎಂಬಿ ಪುಸ್ತಕಗಳು ಇಂಗ್ಲಿಷ್‌ನಲ್ಲಿ ಮಾತ್ರ ಲಭ್ಯ ಇವೆ.
ಈ ಹಿಂದೆ ಕನ್ನಡದಲ್ಲಿ ಭಾಷಾಂತರಿಸುವ ಪ್ರಯತ್ನಗಳೂ ನಡೆದಿದ್ದವು.
ಆದರೆ, 2018ರಲ್ಲಿ ಪರಿಷ್ಕರಣೆಗೊಂಡ ಪಠ್ಯಕ್ರಮಕ್ಕೆ ಅನುಗುಣವಾಗಿ ಕನ್ನಡಕ್ಕೆ ತರ್ಜುಮೆಗೊಂಡು ವಿದ್ಯಾರ್ಥಿಗಳ ಕೈ ಸೇರುತ್ತಿರುವುದು ಇದೇ ಮೊದಲು ಎನ್ನಲಾಗುತ್ತಿದೆ.
ಸದ್ಯ ಕನ್ನಡದಲ್ಲಿ ಪುಸ್ತಕಗಳು ಲಭ್ಯವಿಲ್ಲದ್ದರಿಂದ ಕನ್ನಡದಲ್ಲಿ ಪರೀಕ್ಷೆ ಬರೆಯುವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಕೂಡ ತುಂಬಾ ವಿರಳ. ಪ್ರತಿ ವರ್ಷ ಇಡೀ ರಾಜ್ಯದಲ್ಲಿ 200-300 ಮಂದಿ ಈ ವರ್ಗದವರಿದ್ದಾರೆ ಎನ್ನಲಾಗಿದೆ.
ಕನ್ನಡಕ್ಕೆ ಭಾಷಾಂತರಗೊಂಡ ಈ ಪಿಸಿಎಂಬಿ ಪುಸ್ತಕಗಳು ಆದ್ಯತೆ ಮೇರೆಗೆ ಸರಕಾರಿ ಪಪೂ ಕಾಲೇಜು, ಗ್ರಂಥಾಲಯಗಳಿಗೆ ಪೂರೈಕೆ ಆಗಲಿವೆ. ಅನಂತರ ಮಾರುಕಟ್ಟೆಯಲ್ಲಿ ಸಿಗಲಿವೆ.
ಪಿಯುಸಿ ಪಿಸಿಎಂಬಿ ಪಠ್ಯಪುಸ್ತಕಗಳು ಇಂಗ್ಲಿಷ್‌ನಲ್ಲಿ ಇರುವುದರಿಂದ ಕನ್ನಡದ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಎನ್‌ಇಎಸ್‌ಆರ್‌ಟಿಸಿ ಪುಸ್ತಕಗಳನ್ನು ಕನ್ನಡಕ್ಕೆ ಭಾಷಾಂತರಿಸಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅರ್ಪಿಸಲಾಗುತ್ತಿದೆ’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ
ರಾಜ್ಯದಲ್ಲಿ ಕಾಂಗ್ರೆಸ್ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ
ಶಿರಸಿಯ ರಂಗಭೂಮಿ ಕಲಾವಿದೆ ಶೀತಲ್ ಶ್ರೀಪಾದ ಭಟ್ ಅವರಿಗೆ ಕೆನಡಾದ ಲಿಟರರಿ ಅವಾರ್ಡ್
MUST WATCH
ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ
IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್
Wheel Chair Romeo actor exclusive interview | RELEASING ON MAY 27TH
ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ
ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?
ಹೊಸ ಸೇರ್ಪಡೆ
ಬೆಳ್ತಂಗಡಿ ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ: ಚಾರ್ಮಾಡಿ ಘಾಟಿ, ಭೂಕುಸಿತ ಪ್ರದೇಶ ಪರಿಶೀಲನೆ
ಈಡನ್ನಲ್ಲಿ ಆರ್ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್ ಜೈಂಟ್ಸ್
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ