ಕನ್ನಡಿಗರಿಗೆ ಬಗೆದ ದ್ರೋಹ: ಸಿದ್ದು ಟ್ವೀಟ್
Team Udayavani, Sep 14, 2019, 3:00 AM IST
ಬೆಂಗಳೂರು: ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೇ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನ ಕೆಣುಕುತ್ತಿದೆ. ನಾಡು ನುಡಿ ಬಗೆಗೆ ಮಲತಾಯಿ ಧೋರಣೆಯಿಂದ ನಡೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ-ದ್ದಾರೆ. ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆ ಪರಿಹಾರದಲ್ಲಿ ನಿರ್ಲಕ್ಷ್ಯ. ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ.
ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ರಾಜ್ಯದಿಂದ 25 ಜನ ಬಿಜೆಪಿ ಸಂಸದರು ಆಯ್ಕೆಯಾಗಿ ದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡದಿರುವುದು ಕನ್ನಡಿಗರಿಗೆ ಬಗೆದ ದ್ರೋಹ. ಕನ್ನಡಿಗರು ಇದನ್ನು ಸಹಿಸರು ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ