ಕೇಂದ್ರ ಸರಕಾರದ ನಿರ್ಧಾರ ರಾಜ್ಯಕ್ಕೆ ಬಿಸಿ ತುಪ್ಪ? 


Team Udayavani, Aug 30, 2021, 7:10 AM IST

ಕೇಂದ್ರ ಸರಕಾರದ ನಿರ್ಧಾರ ರಾಜ್ಯಕ್ಕೆ ಬಿಸಿ ತುಪ್ಪ? 

ಬೆಂಗಳೂರು: ಕೇಂದ್ರ ಸರಕಾರ ಇತ್ತೀಚೆಗೆ ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸ ಸೇರ್ಪಡೆ  ಅಧಿಕಾರವನ್ನು ರಾಜ್ಯಗಳಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದರೂ, ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸದಿರುವುದು ರಾಜ್ಯಕ್ಕೆ ತಲೆನೋವಾಗಲಿದೆ.

ಈಗಿರುವ ಮೀಸಲಾತಿ ಪ್ರಮಾಣದ ಪ್ರಕಾರ ರಾಜ್ಯದ ಹಿಂದುಳಿದ ವರ್ಗದ ಪಟ್ಟಿಯಲ್ಲಿ  100ಕ್ಕೂ ಹೆಚ್ಚು ಸಮುದಾಯಗಳಿದ್ದು, ಈ ಪ್ರವರ್ಗದಲ್ಲಿರುವ ಸಮುದಾಯಗಳಿಗೆ ಶೇ.15 ಮೀಸಲಾತಿ ದೊರೆಯುತ್ತಿದೆ. ಇತ್ತೀಚೆಗೆ ನಡೆದ ಸಂಸತ್‌ ಅಧಿವೇಶನದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದ್ದು, ರಾಜ್ಯಗಳಿಗೆ ಒಬಿಸಿ ಸಮು ದಾಯಗಳನ್ನು ಗುರುತಿಸಿ ಪಟ್ಟಿಯಲ್ಲಿ ಸೇರಿಸುವ ಅಧಿಕಾರ ನೀಡಿದೆ.

ಪರಿಣಾಮ ರಾಜ್ಯ ಸರಕಾರ ಯಾವುದೇ ಸಮುದಾಯದ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿ ದಿರುವಿಕೆಯನ್ನು ಪರಿಗಣಿಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಮೀಕ್ಷೆ ನಡೆಸಿ ಆಯೋಗದ ಶಿಫಾರಸಿನಂತೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬಹುದು. ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಿರುವ ಸಮುದಾಯ ನೇರವಾಗಿ ಕೇಂದ್ರದ ಹಿಂದುಳಿದ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ. ಇದರಿಂದ ಸಾಮಾಜಿಕ/ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳು ರಾಜ್ಯದ ಪಟ್ಟಿಯಲ್ಲಿ ಸೇರುವ ಮೂಲಕ ಹಿಂದುಳಿದ ವರ್ಗಗಳಿಗೆ  ರಾಜ್ಯ ಮತ್ತು ಕೇಂದ್ರ ಸರಕಾರದ ಮಟ್ಟದಲ್ಲಿ ದೊರೆಯುವ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ.

ಮಿತಿ ಹೆಚ್ಚಿಸದಿರುವುದು ಸಮಸ್ಯೆ:

ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್‌ ಆದೇಶದಂತೆ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಷ್ಟು ಮೀರಬಾರದು ಎಂದಿ ದೆ. ಇದರಂತೆ ರಾಜ್ಯ ಸರಕಾರ ಯಾವುದೇ ಜಾತಿ ಯನ್ನು ಒಬಿಸಿ ಪಟ್ಟಿಗೆ ಸೇರಿಸಲು ಮುಂದಾದರೆ, ಉಳಿದವರ  ವಿರೋಧ ಎದುರಿಸಬೇಕಾಗುತ್ತದೆ.

ಒಂದು ವೇಳೆ, ಯಾವುದೇ ಪ್ರವರ್ಗ ದಿಂದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸ‌ಲು ಮುಂದಾದರೆ, ಆ ಪ್ರವರ್ಗದ  ಮೀಸಲಾತಿ ಪ್ರಮಾಣ ವನ್ನು  ಸಮುದಾಯದ ಜನಸಂಖ್ಯೆ ಆಧಾರದಲ್ಲಿ  ಹಿಂದುಳಿದ ವರ್ಗಗಳ ಪಟ್ಟಿಗೆ ವರ್ಗಾಯಿಸಬೇಕೆಂಬ ಬೇಡಿಕೆ ಮುಂದಿಟ್ಟರೆ ರಾಜ್ಯ ಸರಕಾರ  ನಿರ್ದಿಷ್ಟ ಪ್ರವರ್ಗದಲ್ಲಿರುವ ಸಮುದಾಯಗಳ ಆಕ್ರೋಶಕ್ಕೆ ತುತ್ತಾಗಬೇಕಾದೀತು.

ಒಳ ಮೀಸಲಾತಿಗೆ ಬೇಡಿಕೆ : ಹಿಂದುಳಿದ ವರ್ಗಗಳಲ್ಲಿ ನೂರಕ್ಕೂ ಹೆಚ್ಚು ಸಮುದಾಯಗಳು ಇರುವುದರಿಂದ  ಶೇ.15ರಷ್ಟು ಇರುವ ಮೀಸಲಾತಿಯಲ್ಲಿ ಸಮುದಾಯಗಳಿಗೂ ಸಮಾನವಾಗಿ ದೊರೆಯುತ್ತಿಲ್ಲ ಎಂಬ ದೂರಿದೆ. ರಾಜಕೀಯ ಹಾಗೂ ಸಾಮಾಜಿಕವಾಗಿ ಪ್ರಬಲವಾಗಿರುವ ಸಮುದಾಯಗಳು ಹಿಂದುಳಿದ ವರ್ಗಗಳಿಗೆ ಮೀಸಲಿರುವ ಬಹುತೇಕ ಮೀಸಲಾತಿಯ ಲಾಭ ಪಡೆದುಕೊಳ್ಳುತ್ತಿವೆ ಎನ್ನಲಾಗುತ್ತಿದ್ದು, ಅದಕ್ಕಾಗಿ ಹಿಂದುಳಿದ ವರ್ಗಗಳಲ್ಲಿ ಅತಿ ಹಿಂದುಳಿದ ವರ್ಗಗಳ ಪಟ್ಟಿಯನ್ನು ಪ್ರತ್ಯೇಕ ಮಾಡಿ ಅವುಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.

ಒಳ ಮೀಸಲಾತಿ ಹಂಚಿಕೆ ಗೊಂದಲ : ಆದರೆ, ಒಳ ಮೀಸಲಾತಿ ಪ್ರಮಾಣವನ್ನು ನಿಗದಿಪಡಿಸುವುದು ಕಷ್ಟವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. 100ಕ್ಕೂ ಹೆಚ್ಚು ಸಮುದಾಯಗಳಲ್ಲಿ ಅತಿ ಹಿಂದುಳಿದಿರುವಿಕೆ ತಿಳಿಯಲು ಜಾತಿ ಸಮೀಕ್ಷೆ ಪಟ್ಟಿ ಪ್ರಕಟಿಸಬೇಕು. ಅಲ್ಲದೇ, ಶೇ.15ರಷ್ಟು ಪ್ರಮಾಣವನ್ನು ಹಂಚಿಕೆ ಮಾಡುವುದು ಕಷ್ಟ ಸಾಧ್ಯ. ಹೀಗಾಗಿ ಅತಿ ಹಿಂದುಳಿದ ಸಮುದಾಯಗಳ ಪಟ್ಟಿಯನ್ನು ಪ್ರತ್ಯೇಕ ಮಾಡಿ ಅವರಿಗೆ ಮೀಸಲಾತಿ ನೀಡುವ ವ್ಯವಸ್ಥೆ ಜಾರಿಗೆ ತರಬೇಕೆಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಕೇಂದ್ರ ಸರಕಾರ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯಗಳಿಗೆ ಅಧಿಕಾರ ನೀಡಿರುವುದು ಒಳ್ಳೆಯದೆ. ಆದರೆ, ಹಿಂದುಳಿದ ವರ್ಗದ ಪಟ್ಟಿಯಲ್ಲಿ ಸೇರಲು ಅರ್ಹವಿರುವ ಜಾತಿಗಳನ್ನು ಮಾತ್ರ ಸೇರಿಸಬೇಕು. ಜತೆಗೆ ತಮಿಳುನಾಡಿನ ರೀತಿಯಲ್ಲಿ ಹಿಂದುಳಿದವರು ಹಾಗೂ ಅತಿ ಹಿಂದುಳಿದವರನ್ನು ಪ್ರತ್ಯೇಕಿಸಬೇಕು.ಎನ್‌.ಶಂಕರಪ್ಪ,  ರಾಜ್ಯ ಹಿಂ. ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ

 

-ಶಂಕರ ಪಾಗೋಜಿ

ಟಾಪ್ ನ್ಯೂಸ್

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

1-wd

ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

narega

ಕಡಬ: 2ನೇ ಬಾರಿ ಜಿಲ್ಲೆಯಲ್ಲೇ ಗುರಿ ಮೀರಿದ ಸಾಧನೆ

2

‘ರಾಜ್ಯ ನಾಯಕರು ಬಿಜೆಪಿ ಅಭ್ಯರ್ಥಿ ಅಂತಲೇ ಕರೆತಂದಿದ್ದಾರೆ’

1

ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆಗೆ ಪಾಲಿಕೆ ಹೆಜ್ಜೆ

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.