ಕರ್ನಾಟಕ ಮೆಗಾಫೈಟ್; BJP 104ರಲ್ಲಿ ಮುನ್ನಡೆ, ಕೈಗೆ ಭಾರೀ ಹಿನ್ನಡೆ
Team Udayavani, May 15, 2018, 9:48 AM IST
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತಎಣಿಕೆ ಮುಂದುವರಿದಿದ್ದು, ಭಾರತೀಯ ಜನತಾ ಪಕ್ಷ 104ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 73 ಸ್ಥಾನ ಹಾಗೂ ಜೆಡಿಎಸ್ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
30 ಜಿಲ್ಲೆಗಳ 38 ಮತಎಣಿಕೆ ಕೇಂದ್ರಗಳಲ್ಲಿ ಮಂಗಳವಾರ ಬೆಳಗ್ಗೆ 8ಗಂಟೆಯಿಂದ ಮತಎಣಿಕೆ ಆರಂಭವಾಗಿತ್ತು. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಸದ್ಯದ ಫಲಿತಾಂಶದ ಪ್ರಕಾರ ಬಿಜೆಪಿ 100ಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಕಾಂಗ್ರೆಸ್ ಕೇವಲ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
222 ಕ್ಷೇತ್ರಗಳ ಮತಎಣಿಕೆ ನಡೆಯುತ್ತಿದ್ದು, ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 112 ಆಗಿದೆ.