ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
Team Udayavani, May 28, 2022, 10:25 AM IST
ಬೆಂಗಳೂರು: ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು.
ಆರ್ ಟಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಖಂಡಿಸುತ್ತೇವೆ. ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನಾವು ಸ್ಪಷ್ಟವಾಗಿ ಸಂದೇಶ ಕಳುಹಿಸಿದ್ದೇವೆ. ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದರು.
ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಪೆಟ್ರೋಲ್ ದರ ಕಡಿಮೆ ಮಾಡುವ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಚರ್ಚೆ ನಡೆಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದರು.
ಇದನ್ನೂ ಓದಿ:ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ
ಆರ್ ಎಸ್ ಎಸ್ ಹೊರಗಡೆಯಿಂದ ಬಂದವರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಿದ್ದರಾಮಯ್ಯ ಎಲ್ಲಿಂದ ಬಂದವರು? ದ್ರಾವಿಡರಾ ಅಥವಾ ಆರ್ಯರೋ? ಮೊದಲು ಹೇಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ: ಉಗ್ರ ಹೋರಾಟದ ಎಚ್ಚರಿಕೆ
ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ
ಕೆಂಪೇಗೌಡರ ಆಶಯ ಈಡೇರಿಸುತ್ತಿರುವ ಪ್ರಧಾನಿ ಮೋದಿ: ನಳಿನ್ಕುಮಾರ್ ಕಟೀಲ್
ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ;ಲಕ್ಷ್ಮಣ ನಿಂಬರಗಿ, ಹರಿರಾಂ ಶಂಕರ್ ಸೇರಿ ಹಲವರ ವರ್ಗಾವಣೆ