ಹಾಸನ ನಗರಸಭೇಲಿ BJP ವಿರೋಧ ಪಕ್ಷ, ಹೊಳೆನರಸಿಪುರದಲ್ಲಿ JDS ಕಿಂಗ್!
Team Udayavani, Sep 3, 2018, 1:46 PM IST
ಹಾಸನ:ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆಯಾಗಿದ್ದ ಹಾಸನ ನಗರಸಭೆ ಮೊದಲ ಬಾರಿಗೆ ಅತಂತ್ರವಾಗಿದ್ದು, 35 ಸ್ಥಾನದ ನಗರಸಭೆಯಲ್ಲಿ ಜೆಡಿಎಸ್ 17, ಬಿಜೆಪಿ 13, ಕಾಂಗ್ರೆಸ್ 02 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆ.
ಕೇವಲ ಒಂದು ಸ್ಥಾನವಿದ್ದ ಬಿಜೆಪಿ ಈ ಬಾರಿ 13 ವಾರ್ಡ್ ಗಳಲ್ಲಿ ಗೆಲುವು ಸಾಧಿಸುವ ಮೂಲಕ ತನ್ನ ಪ್ರಾಬಲ್ಯ ಮೆರೆದಿದೆ. ಕಾಂಗ್ರೆಸ್ ಸಾಧನೆ ಕಳಪೆಯಾಗಿದೆ. ಹಾಸನ ನಗರಸಭೆಯಲ್ಲಿ ಅಧಿಕಾರಕ್ಕೇರಲು 18 ಸ್ಥಾನಗಳ ಅಗತ್ಯವಿದೆ.
ಅರಸೀಕೆರೆ ನಗರಸಭೆ ಜೆಡಿಎಸ್ ಪ್ರಾಬಲ್ಯ:
31 ಸದಸ್ಯ ಬಲದ ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ 22, ಬಿಜೆಪಿ 5, ಕಾಂಗ್ರೆಸ್ 1 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆ.
ಚನ್ನರಾಯಪಟ್ಟಣ ಪುರಸಭೆ ಜೆಡಿಎಸ್ ವಶಕ್ಕೆ:
23 ಸದಸ್ಯ ಬಲದ ಚನ್ನರಾಯಪಟ್ಟಣ ಪುರಸಭೆಯಲ್ಲಿ ಜೆಡಿಎಸ್ 15, ಕಾಂಗ್ರೆಸ್ 8 ಸ್ಥಾನ ಪಡೆದಿದ್ದು, ಬಿಜೆಪಿ ಹಾಗೂ ಪಕ್ಷೇತರರು ಯಾವುದೇ ಖಾತೆ ತೆರೆದಿಲ್ಲ.
ಸಕಲೇಶಪುರ ಪುರಸಭೆ ಜೆಡಿಎಸ್ ತೆಕ್ಕೆಗೆ:
ಸಕಲೇಪುರ ಪುರಸಭೆ 23 ಸದಸ್ಯ ಬಲ ಹೊಂದಿದ್ದು, ಜೆಡಿಎಸ್ 14, ಕಾಂಗ್ರೆಸ್ 4, ಬಿಜೆಪಿ 2 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಹೊಳೆನರಸೀಪುರದಲ್ಲಿ ಜೆಡಿಎಸ್ ಕಿಂಗ್!
ಹಾಲಿ ಸಚಿವ ಎಚ್ ಡಿ ರೇವಣ್ಣ ಕ್ಷೇತ್ರವಾದ ಹೊಳೆನರಸೀಪುರದ ಪುರಸಭೆಯ 23 ವಾರ್ಡ್ ಗಳಲ್ಲಿ ಜೆಡಿಎಸ್ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್, ಬಿಜೆಪಿ ಹಾಗೂ ಪಕ್ಷೇತರರು ಯಾರು ಖಾತೆ ತೆರೆದಿಲ್ಲ.
ಒಟ್ಟು ಜಿಲ್ಲೆಯ ಸ್ಥಳೀಯ ಸಂಸ್ಥೆ ಚುನಾವಣೆಯ 135 ವಾರ್ಡ್ ಗಳಲ್ಲಿ ಜೆಡಿಎಸ್ 91, ಬಿಜೆಪಿ 20, ಕಾಂಗ್ರೆಸ್ 15 ಹಾಗೂ ಪಕ್ಷೇತರರು 9 ಸ್ಥಾನಗಳಲ್ಲಿ ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ ಉಪ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೇಟ್ ಆಕಾಂಕ್ಷಿ : ಮುತಾಲಿಕ್
ಸಾರಿಗೆ ಸಂಸ್ಥೆ ಬಸ್ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸವದಿ
ಭಾರತದ ಔಷಧೋದ್ಯಮ ಮುಂದಿನ 3 ವರ್ಷದಲ್ಲಿ ಸ್ವಾವಲಂಬಿ : ಸದಾನಂದ ಗೌಡ
ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ಚುನಾವಣೆ : ವಿದೇಶದಿಂದ ಬಂದ ಮತದಾರರು
ತೈಲ ದರ ಹೆಚ್ಚಾದರೂ ಚಿಂತೆಯಿಲ್ಲ ಎನ್ನುವವರಿಗೆ ಲೀಟರಿಗೆ 1ಸಾವಿರ ದರ ವಿಧಿಸಿ :ಯು.ಟಿ. ಖಾದರ್
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ
ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿ : ಬಂಟ್ವಾಳ ಪುರಸಭೆಯಿಂದ ಮಾರಾಟಕ್ಕೆ ಸಿದ್ಧತೆ
ಬೈರಿಕಟ್ಟೆ-ಕಲ್ಲಜೇರ-ನೆಕ್ಕಿತ್ತಪುಣಿ ರಸ್ತೆ ವಿಸ್ತರಣೆಗೆ ಆಗ್ರಹ
“ರಥ ಚಲಿಸುವ ಧರ್ಮ ಸಭಾ ಮಂಟಪ’ : ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
“ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಖಾಸಗಿಯವರಿಗೆ ಅವಕಾಶ’