ಪಿಯು ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದರಿಗೆ ಶಾಕ್‌ !


Team Udayavani, Oct 29, 2018, 9:45 AM IST

pu.jpg

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಮೊದಲೇ “ಶಾಕ್‌’!

ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದ ಕೇಂದ್ರವೇ ಬೇರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೀಡಿರುವ
ಕೇಂದ್ರವೇ ಬೇರೆಯಾಗಿದ್ದು, ಕಳೆದ ಮೂರು ವರ್ಷದಿಂದ ಉಪನ್ಯಾಸಕರ ಹುದ್ದೆಗಾಗಿ ಕಾದು ಕುಳಿತಿರುವ ಸಾವಿರಾರು ಅಭ್ಯರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದೆ. 2015ರಲ್ಲಿ ನೇಮಕಾತಿಗೆ ಅಧಿಸೂಚನೆಯಾಗಿದ್ದರೂ,
ಈವರೆಗೂ ನೇಮಕಾತಿ ನಡೆದಿಲ್ಲ. ಅರ್ಜಿ ಆಹ್ವಾನ, ಶುಲ್ಕಪಾವತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ
ಮೂರ್‍ನಾಲ್ಕು ಬಾರಿ ಪ್ರತ್ಯೇಕ ಸುತ್ತೋಲೆ ಹೊರಡಿಸಿ, ರದ್ದು ಮಾಡಲಾಗಿತ್ತು. 2015ರಿಂದಲೂ ನೇಮಕಾತಿ ಪ್ರಕ್ರಿಯೆ
ಗೊಂದಲದ ಗೂಡಾಗಿಯೇ ಉಳಿದಿದೆ.

ಕನ್ನಡ, ಇಂಗ್ಲಿಷ್‌, ಉರ್ದು, ಗಣಿತ, ರಸಾಯಶಾಸ್ತ್ರ, ವಾಣಿಜ್ಯಶಾಸ್ತ್ರ ಸಹಿತವಾಗಿ 20 ವಿಷಯಗಳಲ್ಲಿ ಖಾಲಿ ಇದ್ದ 1,204 ಹುದ್ದೆಗೆ 18,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ತಾಂತ್ರಿಕ ಸಮಸ್ಯೆ ಸಹಿತವಾಗಿ ಎಲ್ಲವೂ ಸರಿಯಾಗುತ್ತಿದೆ ಎನ್ನುವಷ್ಟರಲ್ಲಿ ಅಭ್ಯರ್ಥಿಗಳಲ್ಲಿ ಹೊಸ ಆತಂಕ ಸೃಷ್ಟಿಯಾಗಿದೆ.

ಮಂಗಳೂರು ಕೇಂದ್ರ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಬೆಂಗಳೂರು, ಮೈಸೂರು, ಶಿವಮೊಗ್ಗ ಅಥವಾ ಧಾರವಾಡ ಹೀಗೆ ಹೊರ ಜಿಲ್ಲೆಯ ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. ಅದೇ ರೀತಿ ಮೈಸೂರು, ಧಾರವಾಡ, ಹುಬ್ಬಳ್ಳಿ, ಉಡುಪಿ,ಬೆಂಗಳೂರು ಕೇಂದ್ರ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳ ಕೇಂದ್ರವೂ ಬದಲಾಗಿದೆ. ಒಂದು ವಾರಗಳ ಕಾಲ ಪರೀಕ್ಷೆ ಇರುವುದರಿಂದ ಕೇಂದ್ರ ಬದಲಾಗಿರುವುದು ಸಾಕಷ್ಟು ಸಮಸ್ಯೆ ಉಂಟುಮಾಡಿದೆ. ಬೇರೆ ಜಿಲ್ಲೆಗಳಿಗೆ ಹೋಗಿ ಪರೀಕ್ಷೆ ಬರೆಯಬೇಕಾದರೆ ಅದಕ್ಕೂ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ ಎಂದು ನೊಂದ ಅಭ್ಯರ್ಥಿಗಳು ದೂರಿದ್ದಾರೆ.

ಗೊಂದಲಕ್ಕೆ ಕಾರಣ: ಉಪನ್ಯಾಸಕರ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿದ್ದ ಸಂದರ್ಭದಲ್ಲಿ ಎಲ್ಲ ಜಿಲ್ಲೆಗಳಲ್ಲೂಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಹೀಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಅನುಕೂಲತೆಗೆ ತಕ್ಕಂತೆ ಆಯಾ ಜಿಲ್ಲೆಗಳನ್ನೇ ಆಯ್ಕೆ ಮಾಡಿಕೊಂಡಿದ್ದರು. ತದನಂತರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ಕಾರದ ಸೂಚನೆಯಂತೆ ಪರೀಕ್ಷಾ ಕೇಂದ್ರದ ಸಂಖ್ಯೆಯನ್ನು 30ರ ಬದಲಿಗೆ 8ಕ್ಕೆ ಇಳಿಸಿತ್ತು. ಹೀಗಾಗಿ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರದ
ಅದಲು ಬದಲಾಗಿದೆ.

●ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.