ಸುಲಲಿತ ವ್ಯವಹಾರಗಳ ಶ್ರೇಯಾಂಕ: ಕರ್ನಾಟಕಕ್ಕೆ ಅಗ್ರಸ್ಥಾನ

Team Udayavani, Jun 30, 2022, 8:09 PM IST

tdy-22

ಬೆಂಗಳೂರು: ಸುಲಲಿತ ವ್ಯವಹಾರ (ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌) ಕ್ಕೆ ಸಂಬಂಧಿಸಿದಂತೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.

2020ರ ಸೆಪ್ಟೆಂರ್‌ನಲ್ಲಿ ಬಿಡುಗಡೆಯಾಗಿದ್ದ ಕಳೆದ ಸಾಲಿನ ಶ್ರೇಯಾಂಕ ಪಟ್ಟಿಯಲ್ಲಿ 17ನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ, “ಟಾಪ್ ಅಚೀವರ್‌” ಆಗಿ ಹೊರಹೊಮ್ಮಿರುವುದು ವಿಶೇಷ.

2020ರ ವಹಿವಾಟು ಸುಧಾರಣೆ ಕ್ರಿಯಾ ಯೋಜನೆಯಲ್ಲಿ (ಎಸ್‌ಬಿಆರ್‌ಎಪಿ) ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಾರ್ಷಿಕ ಸುಧಾರಣಾ ಕ್ರಮಗಳ ಪರಿಶೀಲನಾ ವರದಿ ಇಂದು ಬಿಡುಗಡೆಯಾಗಿದೆ.

ಕಳೆದ ವರ್ಷ, ಡಿಪಿಐಐಟಿ ಸೂಚಿಸಿದ್ದ 187 ಸುಧಾರಣಾ ಕ್ರಮಗಳಲ್ಲಿ ಶೇ.100ರಷ್ಟು ಅನುಷ್ಠಾನಗೊಳಿಸಿದ್ದರೂ, ಕರ್ನಾಟಕ 2019 ರಲ್ಲಿ 17ನೇ ಸ್ಥಾನಕ್ಕೆ ಕುಸಿದಿತ್ತು.

ಹಲವು ಸುಧಾರಣಾ ಕ್ರಮಗಳ ಅನುಷ್ಠಾನದ ಜತೆಗೆ, ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ, ಈ ಶ್ರೇಣಿಗೆ ಏರಲು ಸಾಧ್ಯವಾಗಿದೆ.

ಆಂಧ್ರ ಪ್ರದೇಶ, ಗುಜರಾತ್‌, ಹರಿಯಾಣ, ಪಂಜಾಬ್‌, ತಮಿಳುನಾಡು, ತೆಲಂಗಾಣ ಸಹ “ಅಗ್ರ ಸಾಧಕ” ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

ರ‍್ಯಾಂಕಿಂಗ್‌ ಹೇಗೆ? : 

ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಮಿಕರ ನಿಯಂತ್ರಣ ಕಾಯ್ದೆ, ಪರಿಸರ ಪರವಾನಗಿ, ಪ್ರಕ್ರಿಯೆಗಳ ಸರಳೀಕರಣ, ಬಳಕೆದಾರರ ಸಂಪರ್ಕ, ಪ್ರತಿಕ್ರಿಯೆ, ಕುಂದುಕೊರತೆಗಳ ನಿವಾರಣೆ ಸೇರಿದಂತೆ ವಿವಿಧ ಅಂಶಗಳ ಸಮೀಕ್ಷೆ ನಡೆಸಿದ ಡಿಪಿಐಐಟಿ ಶ್ರೇಯಾಂಕ ನಿರ್ಧರಿಸುತ್ತದೆ.

“ಸುಲಲಿತ ವ್ಯವಹಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಫಿಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಕೈಗಾರಿಕಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೈಗಾರಿಕೆಗಳ ಸ್ಥಾಪನೆಗೆ ಇದ್ದ ತೊಡಕು ನಿವಾರಿಸಲಾಗಿದೆ. ನಮ್ಮ ಸರ್ಕಾರ ಸುಲಲಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಿರುವುದರಿಂದ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೆಚ್ಚು ಬಂಡವಾಳ ಹೂಡುತ್ತಿದ್ದಾರೆ”
-ಡಾ. ಮುರುಗೇಶ್‌ ಆರ್‌. ನಿರಾಣಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು

“ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಪೂರಕವಾದ ಸುಧಾರಣಾ ಕ್ರಮಗಳ ಅನುಷ್ಠಾನವನ್ನು ಖಾತ್ರಿಪಡಿಸುವ ನೋಡಲ್‌ ಏಜೆನ್ಸಿ ‘ಕರ್ನಾಟಕ ಉದ್ಯೋಗ ಮಿತ್ರ’ ಡಿಪಿಐಐಟಿ ಮಾಡಿದ ಶಿಫಾರಸುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಫಲವಾಗಿ ರಾಜ್ಯ ಇಂದು ಅಗ್ರ ಶ್ರೇಯಾಂಕ ಪಡೆಯಲು ಸಾಧ್ಯವಾಗಿದೆ”.
-ಡಾ.ಇ ವಿ ರಮಣರೆಡ್ಡಿ,ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ

ಕೊವಿಡ್‌ ಸಾಂಕ್ರಾಮಿಕದ ನಡುವೆಯೂ ರಾಜ್ಯದಲ್ಲಿ ಉದ್ಯಮ ಸ್ನೇಹಿ ಕ್ರಮಗಳ ಜಾರಿ ಮತ್ತು ಕೈಗಾರಿಕಾ ಪೂರಕ ಸೌಲಭ್ಯ ಒದಗಿಸುವಲ್ಲಿ ‘ಕರ್ನಾಟಕ ಉದ್ಯೋಗ ಮಿತ್ರ’ ಸಫಲವಾಗಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ಮೂಲಕ ರಾಜ್ಯ ಅಗ್ರ ಶ್ರೇಯಾಂಕ ಪಡೆಯುವಂತಾಗಿದೆ.-ಗುಂಜನ್‌ ಕೃಷ್ಣ,ಕೈಗಾರಿಕಾಭಿವೃದ್ಧಿ ಆಯುಕ್ತರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.