Karnataka; ಕನ್ನಡ ಕಲಿಯದೆಯೂ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು: ಸಿಎಂ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ...

Team Udayavani, Nov 3, 2023, 4:39 PM IST

1-qwewqeqw

ಗದಗ: ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ದಿ ಕಾಟನ್‍ಸೇಲ್ ಸೊಸೈಟಿ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಿರುವ ಕರ್ನಾಟಕ ಸಂಭ್ರಮ – 50ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು , ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಗದಗ-ಬೆಟಗೇರಿ ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ. ಅಗತ್ಯಬಿದ್ದರೆ ಮತ್ತೆ ಕೊಡುತ್ತೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.