ಕಾವೇರಿ ನಿರ್ವಹಣಾ ಮಂಡಳಿ: ವಿರೋಧ
Team Udayavani, Sep 22, 2017, 9:10 AM IST
ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಮೊದಲಿನಿಂದಲೂ ಬಿಜೆಪಿ ವಿರೋಧವಿದ್ದು, ಈ ವಿಚಾರದಲ್ಲಿ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಲು ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಸುಪ್ರೀಂಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯದ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡಳಿ ರಚನೆ ಮಾಡಿದರೆ ರಾಜ್ಯದ ಹಕ್ಕು ಕೈಬಿಟ್ಟಂತಾಗುತ್ತದೆ. ಇದಕ್ಕೆ ಮೊದಲಿನಿಂದಲೂ ನಮ್ಮ ವಿರೋಧವಿದ್ದು, ಈಗಲೂ ಅದೇ ನಿಲುವು ಹೊಂದಿದ್ದೇವೆ. ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಮೌನ: ಮಹದಾಯಿ ವಿಚಾರ ಕುರಿತು ಪ್ರಸ್ತಾಪಿಸಿದ ಅವರು, ನ್ಯಾಯಾಲಯದ ಹೊರಗೆ ವಿವಾದ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕಾಗಿ ದೆಹಲಿಯಲ್ಲಾದರೂ ಮಾತನಾಡುತ್ತೇವೆ, ಇಲ್ಲವೇ ಗೋವಾದಲ್ಲಾದರೂ ಮಾತನಾಡುತ್ತೇವೆ. ಪಕ್ಷದಲ್ಲಿ ಈ ಕುರಿತಂತೆ ಚರ್ಚೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್ ಈ ವಿಚಾರದಲ್ಲಿ ಮೌನವಾಗಿರುವುದರಿಂದ ನಾವು ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ