ಕೇರಳ ಆರೋಗ್ಯ ವಿಜ್ಞಾನ ವಿವಿ ಮಂಡಳಿ ಸದಸ್ಯರಾಗಿ ಡಾ.ಶಹಾಪುರ ನೇಮಕ
Team Udayavani, Jul 6, 2021, 6:01 PM IST
ವಿಜಯಪುರ : ವಿಜಯಪುರ ಜಿಲ್ಲೆಯ ವೈದ್ಯಕೀಯ ಬಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ಪ್ರವೀಣ ಶಹಾಪುರ ಕೇರಳ ರಾಜ್ಯದ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ರಿಕ್ಲೀನಿಕಲ್ ಸ್ನಾತಕೋತ್ತರ ವಿಭಾಗದ ಅಧ್ಯಯನ ಮಂಡಳಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ನಗರದ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಮೈಕ್ರೋ ಬಯಾಲಜಿ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ.ಪ್ರವೀಣ ಇವರನ್ನು ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಸ್ನಾತಕೋತ್ತರ ವಿಭಾಗಕ್ಕೆ ಅಧ್ಯಯನ ಮಂಡಳಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ :ಬೀದಿಯಲ್ಲಿ ತಿರುಗಿದರೂ ನನ್ನನ್ನೂ ಯಾರೂ ಗುರುತಿಸಲಿಲ್ಲ : ನಟಿ ಸನ್ನಿ ಲಿಯೋನ್