ಸಿಎಂ ಸ್ಥಾನಕ್ಕೆ ಖರ್ಗೆ ಅರ್ಹ ವ್ಯಕ್ತಿ: ಆರ್‌ವಿಡಿ

Team Udayavani, May 19, 2019, 3:00 AM IST

ಬೆಳಗಾವಿ: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹ ವ್ಯಕ್ತಿ. ಅದರಲ್ಲಿ ಎರಡು ಮಾತಿಲ್ಲ. ಆದರೆ, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲದಿರುವಾಗ ಇದರ ಬಗ್ಗೆ ಅನಗತ್ಯ ಚರ್ಚೆ ಮಾಡುವುದು ಸರಿಯಲ್ಲ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಖಾರವಾಗಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಐದು ವರ್ಷಗಳಿಗೆ ಒಪ್ಪಂದ ಆಗಿದೆ. ಹೀಗಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅರ್ಹವಾದ ವ್ಯಕ್ತಿ ಎಂದು ಹೇಳುವ ಅಗತ್ಯವಿರಲಿಲ್ಲ.

ಪದೇ ಪದೆ ಈ ವಿಚಾರವನ್ನು ಪ್ರಸ್ತಾಪ ಮಾಡುವುದು ಸರಿಯಲ್ಲ. ನಿಮಗೆ ಬದಲಾವಣೆ ಮಾಡುವ ಮನಸ್ಸಿದ್ದರೆ ಮಾಡಿ ಬಿಡಿ. ಅದನ್ನು ಬಿಟ್ಟು ಒಮ್ಮೆ ಸಿದ್ದರಾಮಯ್ಯ ಹೆಸರು, ಮತ್ತೂಮ್ಮೆ ಖರ್ಗೆ ಅವರ ಹೆಸರು, ಇನ್ನೊಮ್ಮೆ ಮತ್ತೂಬ್ಬರ ಹೆಸರು ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದರು.

ಈ ರೀತಿಯ ಹೇಳಿಕೆಗಳಿಂದ ಪರಸ್ಪರ ಸಂಬಂಧ ಹದಗೆಡುತ್ತದೆ. ವೈಯಕ್ತಿಕ ಟೀಕೆಗಳು ಹೆಚ್ಚಾಗುತ್ತವೆ. ಶಬ್ದಗಳು ತೂಕದಲ್ಲಿರಬೇಕು. ಕೆಲವೊಮ್ಮೆ ಟೀಕೆಗಳು ಭಾರೀ ನಷ್ಟ ಉಂಟು ಮಾಡುತ್ತವೆ. ಈಗ ಸಮ್ಮಿಶ್ರ ಸರ್ಕಾರ ಚೆನ್ನಾಗಿಯೇ ನಡೆಯುತ್ತಿದೆ. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನ ಖಾಲಿ ಇದ್ದಾಗ ಆ ಸ್ಥಾನಕ್ಕೆ ಯಾರನ್ನು ಮಾಡಬೇಕು. ಯಾರು ಇದ್ದರೆ ಉತ್ತಮ ಎಂಬುದರ ಬಗ್ಗೆ ಚರ್ಚೆ ನಡೆಯಲಿ. ವಿನಾಕಾರಣ ಚರ್ಚೆ ಮಾಡಿ ವಿವಾದ ಸೃಷ್ಟಿ ಮಾಡುವುದು ಬೇಡ. ಮಾಧ್ಯಮಗಳ ಮುಂದೆ ಏನೇನೋ ಮಾತನಾಡಿ ಪ್ರಚಾರ ಪಡೆಯುವುದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮೈಸೂರು/ ಬೆಂಗಳೂರು: ಪಾಕಿಸ್ಥಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಾ ಲಿಯೋನಾಗೆ ನಕ್ಸಲ್‌ ನಂಟು ಇರುವುದು ಸಾಬೀತಾ ಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ...

  • ಬೆಂಗಳೂರು: ಅನಕ್ಷರತೆ, ಬಡತನ, ಮೂಢನಂಬಿಕೆ, ಸಂಪ್ರದಾಯಗಳು,ಅರಿವಿನ ಕೊರತೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹ ಹೆಚ್ಚುತ್ತಲೇ ಇದೆ. ಕಳೆದ ಐದು ವರ್ಷಗಳಲ್ಲಿ 453...

  • ಬೆಂಗಳೂರು: ಅಮೂಲ್ಯಾ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ "ಮುಸಲ್ಮಾನ್‌,ದಲಿತ,ಕಾಶ್ಮೀರಿ, ಟ್ರಾನ್ಸ್‌,ಆದಿವಾಸಿ-ಮುಕ್ತಿ, ಮುಕ್ತಿ, ಮುಕ್ತಿ, ಈ ಕೂಡಲೇ' ಎಂಬ...

  • ಬೆಂಗಳೂರು: ರಾಜ್ಯದ ಸರಕಾರಿ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಿದೇಶೀ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಹೆಚ್ಚು ನಿಗಾ ವಹಿಸಬೇಕು ಎಂದು ಕಾಲೇಜು...

  • ಬೆಂಗಳೂರು: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಶ ಕೊಟ್ಟು, ಅವುಗಳನ್ನು ಓದುಗ ಸ್ನೇಹಿ ಮತ್ತು ಜನಸ್ನೇಹಿ ಜ್ಞಾನ ಕೇಂದ್ರಗಳನ್ನಾಗಿ ಮಾಡಲು ಗ್ರಾಮೀಣಾಭಿವೃದ್ಧಿ...

ಹೊಸ ಸೇರ್ಪಡೆ