3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ‌ ಮನೆಗಳಿಗೆ ಔಷಧಿ ವಿತರಿಸಲು ಸೂಚನೆ

Team Udayavani, Jan 20, 2022, 4:26 PM IST

3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ‌ ಮನೆಗಳಿಗೆ ಔಷಧಿ ವಿತರಿಸಲು ಸೂಚನೆ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ವಿಪರೀತವಾಗಿ ಹರಡುತ್ತಿದ್ದು, ಶಾಲಾ ಮಕ್ಕಳು ಸೇರಿದಂತೆ 3 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಿದ್ದಾರೆ. ಈ ಪೈಕಿ ಬಹುತೇಕ ಸೋಂಕಿತರು ಮನೆಗಳಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಆಸ್ಪತ್ರೆಗಳ ಮೇಲೆ ಒತ್ತಡ ಇಲ್ಲವಾಗಿದೆ.

ಮಾರಣಾಂತಿಕವಲ್ಲದ ಕೊರೊನಾ 3ನೇ ಅಲೆ ಎದುರಿಸಲು ಜಿಲ್ಲಾಡಳಿತ ಮನೆಗಳಿಗೆ ಔಷಧಿ ವಿತರಿಸಲು, ರೋಗಿಗಳ ಮಾಹಿತಿ ಸಂಗ್ರಹಿಸಲು ಮತ್ತು ಕೋವಿಡ್‌ ಮಾರ್ಗಸೂಚಿ ಪಾಲನೆ ನಿಗಾವಹಿಸಲು ವ್ಯವಸ್ಥೆ ಮಾಡಿದೆ.

ಫೀವರ್ ಕ್ಲಿನಿಕ್‌: ಕೋಲಾರ ಜಿಲ್ಲೆಯಲ್ಲಿ 74 ಪ್ರಾಥಮಿಕ ಆರೋಗ್ಯ ಕೇಂದ್ರ, 4 ಜನರಲ್‌ ಆಸ್ಪತ್ರೆ, 2 ಜಿಲ್ಲಾಸ್ಪತ್ರೆ ಹಾಗೂ 2 ಸಮುದಾಯ ಆರೋಗ್ಯಕೇಂದ್ರ ಸೇರಿ ಒಟ್ಟು 82 ಆರೋಗ್ಯ ಕೇಂದ್ರಗಳಲ್ಲಿಯೂ  ಫೀವರ್ ಕ್ಲಿನಿಕ್‌ ತೆರೆಯಲು ಆರೋಗ್ಯ ಇಲಾಖೆ ಸೂಚಿಸಿದೆ. ಲಭ್ಯಇರುವ ವೈದ್ಯರು ಹಾಗೂ ಸಿಬ್ಬಂದಿಯನ್ನೇ ಬಳಸಿಕೊಂಡು ದಿನದ 24 ಗಂಟೆಯೂ ಸೋಂಕಿತರಿಗೆ ಚಿಕಿತ್ಸೆ ಮತ್ತು ಅಗತ್ಯ ಔಷಧಿ ಸಿಗುವಂತೆ ಮಾಡಲು ಸೂಚನೆ ನೀಡಲಾಗಿದೆ. ಕೊರೊನಾ ಚಿಕಿತ್ಸೆ ಔಷಧಿಗಳು ಬಹುತೇಕ ಆಸ್ಪತ್ರೆಗಳಲ್ಲಿ ದಾಸ್ತಾನಿದ್ದು, ಅಗತ್ಯ ಔಷಧಿ ನಿಗದಿತ ಅನುದಾನದಿಂದ ಖರೀದಿಸಲು ಅನುಮತಿಸಲಾಗಿದೆ. ಕೋಲಾರ ತಾಲೂಕಿನಲ್ಲಿ ಸಿಎಂಆರ್‌ ಫೌಂಡೇಷನ್‌ ಸುಮಾರು 3 ಸಾವಿರ ಔಷಧಿ ಕಿಟ್‌ ಆರೋಗ್ಯ ಇಲಾಖೆಗೆ ನೀಡುವ ಮೂಲಕ
ಜನರ ಚಿಕಿತ್ಸೆಗೆ ಸ್ಪಂದಿಸುತ್ತಿದೆ.

ನಿತ್ಯ ವರದಿ ನೀಡಲು ಸೂಚನೆ: ಆರೋಗ್ಯ ಇಲಾಖೆ ತನ್ನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಂರಕ್ಷಣಾಧಿಕಾರಿ, ಆರೋಗ್ಯ ನಿರೀಕ್ಷಕರಿಗೆ ಅಗತ್ಯ ಸೂಚನೆ ನೀಡಿದ್ದು, ಆಯಾ ಆರೋಗ್ಯ ಕೇಂದ್ರ ವ್ಯಾಪ್ತಿಯ ಸೋಂಕಿತರ ಸ್ಥಿತಿಗತಿ ಕುರಿತಂತೆ ನಿತ್ಯವೂ ಮಾಹಿತಿ ಸಂಗ್ರಹಿಸಿ ಆರೋಗ್ಯಾಧಿಕಾರಿಗಳ ಕಚೇರಿಗೆ ಕಳುಹಿಸಲು ಆದೇಶ
ಹೊರಡಿಸಲಾಗಿದೆ.

ಇದನ್ನೂ ಓದಿ : ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

ಸಂಪರ್ಕಿತರ ಪತ್ತೆಗೆ ಕ್ರಮ : ಆರೋಗ್ಯಸಿಬ್ಬಂದಿ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚಿ ಆರೋಗ್ಯ ಸ್ಥಿತಿಗತಿ ಕುರಿತಂತೆ ನಿಗಾವಹಿಸಲಾಗುತ್ತಿದೆ. ಅಗತ್ಯವಿದ್ದರೆ ಅಂತವರ ಗಂಟಲ ಮೂಗಿನ ದ್ರವ ಪರೀಕ್ಷೆಗೆ ಕಳುಹಿಸಿ 24 ಗಂಟೆಯೊಳಗಾಗಿ ಫ‌ಲಿತಾಂಶ ಸಿಗುವಂತೆ ಮಾಡಲು ಸೂಚಿಸಲಾಗಿದೆ.

ಕೊರೊನಾ ಚಿಕಿತ್ಸೆಗೆ ಬಳಸುವ ಔಷಧಿಗಳು ಏನೇನು?
ಆಯುಕ್ತಾಲಯ ಹೊರಡಿಸಿರುವ ಸುತ್ತೋಲೆ ಪ್ರಕಾರ ಕೋವಿಡ್‌ 19 ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರಿಗೆ ನೀಡಬೇಕಾದ ಕಿಟ್‌ನಲ್ಲಿ ವಿಟಮಿನ್‌ ಸಿ, ಜಿಂಕ್‌, ಪ್ಯಾರಸೆಟಮಾಲ್‌, ಸಿಟ್ರಿಜನ್‌, ಪಾಂಟೋಪ್ರೋಜಲ್‌, ಕೆಮ್ಮಿನ ಔಷಧಿಗಳು ಕಡ್ಡಾಯವಾಗಿ ಇರುವಂತೆ ಸೂಚಿಸಲಾಗಿದೆ. ಜತೆಗೆ ಕಿಟ್‌ನಲ್ಲಿ ಮೂರು ಪದರದ 10ಮಾಸ್ಕ್ ಮತ್ತು ಕೈ ಸ್ವತ್ಛತೆಗೆ ಸ್ಯಾನಿಟೈಜರ್‌ ಬಾಟಲ್‌ ಇಡಲು ನಿರ್ದೇಶಿಸಲಾಗಿದೆ. ಮನೆಯಲ್ಲಿ ಪ್ರತ್ಯೇಕವಾಗಿರುವ ಕೋವಿಡ್‌ ದೃಢಪಟ್ಟ ವ್ಯಕ್ತಿ ಪಾಲಿಸಬೇಕಾದ ಸೂಚನೆಗಳನ್ನು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ರವಾನಿಸಿ ಪಾಲಿಸುವಂತೆ ಸೋಂಕಿತರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ.

– ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

3 ಹುಲಿ ಮರಿಗಳಿಗೆ ತಾಯಿಯಾದ ನಾಯಿ-ವಿಡಿಯೋ ವೈರಲ್

ಈ 3 ಹುಲಿ ಮರಿಗಳಿಗೆ ನಾಯಿಯೇ “ತಾಯಿ’!-ವಿಡಿಯೋ ವೈರಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ನೆರೆ ರಾಜ್ಯಗಳಿಗೆ 831.53 ಮಿ.ಯೂ. ವಿದ್ಯುತ್‌ ಮಾರಾಟ

ನೆರೆ ರಾಜ್ಯಗಳಿಗೆ 831.53 ಮಿ.ಯೂ. ವಿದ್ಯುತ್‌ ಮಾರಾಟ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.