Kollur ಮೂಕಾಂಬಿಕಾ ದೇಗುಲ ಪಕ್ಕ ಹೆದ್ದಾರಿ: ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್
Team Udayavani, Feb 21, 2024, 10:44 PM IST
ಬೆಂಗಳೂರು: ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧೀನ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಿರುವ ಹೈಕೋರ್ಟ್, ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಿರ್ದೇಶನ ನೀಡಿದೆ.
ಸ್ಥಳೀಯ ನಿವಾಸಿ ಗುರುಪ್ರಸಾದ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾ| ಟಿ.ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ ಪಿ. ದಳವಾಯಿ ವಾದ ಮಂಡಿಸಿ, ಯೋಜನೆ ಪ್ರಕಾರ ಕಾಮಗಾರಿ ನಡೆದರೆ, ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು ಹದಿನೈದು ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯ ಸಾಧ್ಯತೆಯಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪೀಠ ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಿ, ವಿವರಣೆ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು