ಕೊರಟಗೆರೆ : ಖಾಸಗಿ ಬಸ್ ಚಾಲಕನ ಅವಾಂತರಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, May 8, 2022, 7:03 PM IST
ಕೊರಟಗೆರೆ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೈಕ್ ಚಾಲಕ ರವಿ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕೈಮರ-ತೋವಿನಕೆರೆ ಮುಖ್ಯರಸ್ತೆಯ ದೇವರಹಳ್ಳಿ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೋವಿನಕೆರೆ ಕಡೆಗೆ ಚಾಲನೆ ಮಾಡಿಕೊಂಡು ಬರುತ್ತಿರುವಾಗ ಎದುರಿನಿಂದ ತೋವಿನಕೆರೆ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್ಸಿನ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಬೈಕ್ ಗೆ ಢಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರ ರವಿ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ವೇಳೆ ಬಸ್ಸು ಚಾಲಕ ಬಸ್ಸನ್ನು ನಿಲ್ಲಿಸದೆ ಸ್ವಲ್ಪ ದೂರ ಚಲಾಯಿಸಿಕೊಂಡು ಹೋಗಿ ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ.
ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜು ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಪಿಎಸ್ ಐ ಅಕ್ರಮ ನೇಮಕಾತಿ;ಸಿಐಡಿ ಎಂತೆಂಥಹವರನ್ನೊ ಬಂಧಿಸಿದೆ : ಪ್ರಹ್ಲಾದ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ