ಸೂಟ್ಕೇಸ್ ಸಂಸ್ಕೃತಿ ಬಿಜೆಪಿಯಲ್ಲಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Team Udayavani, Sep 3, 2021, 6:52 AM IST
ಗದಗ: ಸೂಟ್ಕೇಸ್, ಬ್ಯಾಗ್ ನೀಡುವುದು ಜೆಡಿಎಸ್ನಲ್ಲಿರಬಹುದು. ಆದರೆ ಅಂತಹ ಸಂಸ್ಕೃತಿ ಬಿಜೆಪಿಯಲ್ಲಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ಅವರು ಬ್ಯಾಗ್, ಸೂಟ್ಕೇಸ್ಗಳಲ್ಲಿ ಹಣ ಕೊಂಡೊಯ್ಯಲು ಬರುತ್ತಾರೆಂಬುದು ನಿರಾಧಾರ. ಸೂಟ್ಕೇಸ್ ಪದ್ಧತಿ ಕುಮಾರಸ್ವಾಮಿ ಅವರ ಪಕ್ಷದಲ್ಲಿರಬಹುದಷ್ಟೆ ಎಂದರು.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರಕಾರದ ಆಡಳಿತವನ್ನು ಹೊಗಳುತ್ತಾರೆ ಎಂಬ ಭ್ರಮೆ ನಮ್ಮಲ್ಲಿಲ್ಲ. ಅವರ ಅನಾರೋಗ್ಯಕರ ಟೀಕೆಗೆ ಸೂಕ್ತ ವೇದಿಕೆಯಲ್ಲಿ ಉತ್ತರಿಸಲಾಗುವುದು. ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ವಿತರಣೆಯಲ್ಲಿ ವಿಳಂಬವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಶನಿವಾರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ, ತ್ವರಿತಗತಿ ಯಲ್ಲಿ ಪ್ರೋತ್ಸಾಹಧನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ಯೋಜನೆಗಳಿಗೆ ಅನುದಾನ ಬಿಡುಗಡೆ ತಡವಾಗಿದೆ ಎಂಬ ದೂರು ಗಳಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಸತಿ ನಿಲಯಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಸರಿಪಡಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ