ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ


Team Udayavani, Oct 26, 2022, 12:24 PM IST

ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ

ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಇದೇ ತಿಂಗಳು 28 ರಂದು ಆಯೋಜಿಸಿರುವ ” ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1 ಕೋಟಿ 10 ಲಕ್ಷ ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ.

ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, ಅಕ್ಟೋಬರ್ 28 ರಂದು ಕೋಟಿ ಕಂಠ ಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಲಿದೆ.

ಈ ಕಾರ್ಯಕ್ರಮ ನಿಮಿತ್ತ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿದ್ದು, ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ ಕ್ಯೂ ಆರ್ ಕೋಡ್ ನಲ್ಲಿ 1.1 ಕೋಟಿ ಹೆಸರು ನೋಂದಣಿಯಾಗಿತ್ತು. ಇದೀಗ ಈ ಸಂಖ್ಯೆ 1.10 ಕೋಟಿಗೆ ತಲುಪಿದೆ. ಮುಂದಿ‌ನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಭೆ : ಈ ಕಾರ್ಯಕ್ರಮದ ನಿಮಿತ್ತ ಸಚಿವ ಸುನಿಲ್‌ಕುಮಾರ್ ನೇತೃತ್ವದಲ್ಲಿ 50 ಕ್ಕೂ ಹೆಚ್ಚು ಸಭೆಗಳು ನಡೆದಿವೆ.‌ ಆಟೊ ಚಾಲಕರ ಸಂಘ, ಮಹಿಳಾ ಸ್ವಸಹಾಯ ಸಂಘ, ಸಹಕಾರಿ ಬ್ಯಾಂಕ್, ಗ್ರಾಮ ಪಂಚಾಯಿತಿ, ಐಟಿಬಿಟಿ ಉದ್ಯೋಗಿಗಳು, ವಿಶ್ವವಿದ್ಯಾಲಯ, ಶಾಲಾ- ಕಾಲೇಜು, ಚಾಲಕ ಸಂಘ ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಸಂಘಟನೆಗಳ ಜತೆಗೆ ಸಚಿವರು ಖುದ್ದು ಸಭೆ ನಡೆಸಿದ್ದಾರೆ.

ಆರು ಗೀತೆ :

ಅಕ್ಟೋಬರ್‌ ೨೮ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” , ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು,  ಡಾ.ಚನ್ನವೀರ ಕಣವಿ ಅವರ “ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ “, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ “ , ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ “ ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು “ ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ.

ಎಲ್ಲೆಲ್ಲಿ:

ರಾಜ್ಯ, ಗಡಿನಾಡು, ಸಾಗರೋತ್ತರ ಹೊರತುಪಡಿಸಿ ರಾಜ್ಯದ ಹದಿನೈದು ಸ್ಥಳಗಳಲ್ಲಿ ವಿಶೇಷ ಕಾರ್ತಕ್ರಮ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲು, ಗಾಂಧಿ ಪ್ರತಿಮೆ, ಹೈಕೋರ್ಟ್, ಕಂಠೀರವ ಕ್ರೀಡಾಂಗಣ, ವಿಮಾನ, ರೈಲು, ಚಿತ್ರದುರ್ಗದ ಕೋಟೆ, ಕಡಲ ತೀರಗಳಲ್ಲಿ ಕನ್ನಡದ ಗೀತೆ ಮೊಳಗಲಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.