ಕೆಪಿಟಿಸಿಎಲ್ ನ 1899 ಹುದ್ದೆಗಳ ಭರ್ತಿಗೆ ಚಾಲನೆ: ಸಚಿವ ಸುನಿಲ್ ಕುಮಾರ್

Team Udayavani, Oct 11, 2021, 4:30 PM IST

ಕೆಪಿಟಿಸಿಎಲ್ ನ 1899 ಹುದ್ದೆಗಳ ಭರ್ತಿಗೆ ಚಾಲನೆ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ ಮಾತನಾಡಿದರು.

ಕೆಪಿಟಿಸಿಎಲ್ ನ 1899 ಹುದ್ದೆಗಳಿಗೆ 2019ರ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಅಂದಿನಿಂದ ಇಂದಿನವರೆಗೂ ಈ ನೇಮಕಾತಿ ಪ್ರಕ್ರಿಯೆ ನಾನಾ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿತ್ತು, ಈ ಬಗ್ಗೆ ಅನೇಕರು ನನ್ನ ಗಮನ ಸೆಳೆದಾಗ ನಾನು ಕೂಡಲೇ ಅಗತ್ಯವಾದ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ಆದೇಶ ಪತ್ರ ನೀಡುವಂತೆ ಸೂಚನೆ ನೀಡಿದ್ದೆ, ಅದರಂತೆ ಇಂದು 21 ಜನ ಕಿರಿಯ ಪವರ್ ಮ್ಯಾನ್ ಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ, ಅತ್ಯಂತ ಶೀಘ್ರದಲ್ಲೇ ಉಳಿದ  1878 ಜನರಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಅವರು ತಿಳಿಸಿದರು. ನಮ್ಮ ಸರ್ಕಾರ ಬಂದ ನಂತರ ಅತಿ ದೊಡ್ಡ ಪ್ರಮಾಣದಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿರುವುದು ವೈಯಕ್ತಿಕವಾಗಿ ನನಗೆ ಸಂತೋಷ ತಂದಿದೆ ಎಂದರು.

ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ ಇತರ ಹುದ್ದೆಗಳ ಭರ್ತಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಹಾಗೂ ಕೆಪಿಟಿಸಿಎಲ್ ನ ವ್ಯವಸ್ಥಾಪಕ ನಿರ್ದೇಶಕಿ ಡಾ. ಎಂ. ಮಂಜುಳಾ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.