ಅಥಣಿ :ಹೊಂಡಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ;15 ಮಂದಿಗೆ ಗಂಭೀರ ಗಾಯ

Team Udayavani, Nov 17, 2018, 12:28 PM IST

ಅಥಣಿ: ತಾಲೂಕಿನ ಬಣಜವಾಡದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದ ಅವಘಡ ಶನಿವಾರ ಬೆಳಗ್ಗೆ ನಡೆದಿದೆ. ಅವಘಡದಲ್ಲಿ 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಥಣಿಯಿಂದ ಮಹಾರಾಷ್ಟ್ರದ ಮೀರಜ್‌ ಕಡೆಗೆ ಬಸ್‌ ಪ್ರಯಾಣ ಬೆಳೆಸಿತ್ತು. ಗಾಯಾಳುಗಳ ಪೈಕಿ ಬಾಲಕನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿ ಹಲವರನ್ನು ಹೊಂಡದಿಂದ ಮೇಲಕ್ಕೆತ್ತಿದ್ದಾರೆ.

ಅಥಣಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ