Bengaluru; ಬಂಧಕ್ಕೊಳಗಾಗಿರುವ ಐವರು ಉಗ್ರರ ವಿರುದ್ಧ ತನಿಖೆ ಕೈಗೆತ್ತಿಕೊಳ್ಳಲಿರುವ NIA

Team Udayavani, Nov 3, 2023, 3:05 PM IST

NIA

ಬೆಂಗಳೂರು: ರಾಜ್ಯದ ರಾಜಧಾನಿಯ ಜನನಿಬಿಡ ಪ್ರದೇಶಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಬಹುದೊಡ್ಡ ಸಂಚನ್ನು  ಮಾಡಿದ್ದ ಐವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ ಮೂರು ತಿಂಗಳ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಯನ್ನು ಕೈಗೆತ್ತಿಕೊಳ್ಳಲು ಸಿದ್ಧವಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಜುಲೈನಲ್ಲಿ ಇಲ್ಲಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದರು.“ನಾವು ಆದೇಶವನ್ನು ಸ್ವೀಕರಿಸಿದ್ದೇವೆ. ಎನ್‌ಐಎ ಬಂದು ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ. ಅವರು ಬಂದ ನಂತರ ನಾವು ಪ್ರಕರಣವನ್ನು ಅಧಿಕೃತವಾಗಿ ಅವರಿಗೆ ಹಸ್ತಾಂತರಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಬಂಧಿತರು ಆರ್‌.ಟಿ. ನಗರದ ಸುಲ್ತಾನ್‌ ಪಾಳ್ಯ ನಿವಾಸಿ, ಸಯ್ಯದ್‌ ಸುಹೈಲ್‌ ಖಾನ್‌(24), ಕೊಡಿಗೇಹಳ್ಳಿಯ ಮಹಮದ್‌ ಉಮರ್‌ (29), ಭದ್ರಪ್ಪ ಲೇಔಟ್‌ ನಿವಾಸಿ ಜಾಹೀದ್‌ ತಬ್ರೇಜ್‌(25), ಸಯ್ಯದ್‌ ಮುದಾಸಿರ್‌ ಪಾಷ(28), ಮಹಮ್ಮದ್‌ ಫೈಸಲ್ (30) ಎನ್ನುವವರಾಗಿದ್ದಾರೆ.

2008ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 10 ವರ್ಷಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಿಷೇಧಿತ ಲಷ್ಕರ್‌ -ಎ- ತಯ್ಯಬಾ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಟಿ.ನಾಸಿರ್‌ ಜತೆ ನಂಟು ಹೊಂದಿದ್ದರು.

ಆರೋಪಿಗಳು ಕೊಲೆ, ದರೋಡೆ, ಕಳ್ಳಸಾಗಣೆ ಮತ್ತು ಇತರ ಅಪರಾಧಗಳ ಆರೋಪಿಗಳಾಗಿದ್ದಾರೆ. ಅವರು ಜೈಲಿನಲ್ಲಿರುವ ಇತರ ಭಯೋತ್ಪಾದಕ ಆರೋಪಿಗಳೊಂದಿಗೆ ಸಂಪರ್ಕದಲ್ಲಿದ್ದರು. ಪಾಕಿಸ್ಥಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಜತೆ ನಜೀರ್ ಸಂಪರ್ಕ ಹೊಂದಿರುವ ನಜೀರ್ ಗ್ಯಾಂಗ್ ಸದಸ್ಯರು ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಯೋಜಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತ ಉಗ್ರರಿಂದ ಅಪಾರ ಪ್ರಮಾಣದ ಸ್ಫೋಟಕಗಳನ್ನು, ಏಳು ಪಿಸ್ತೂಲ್‌ಗಳು, 12 ಮೊಬೈಲ್ ಫೋನ್‌ಗಳು, 45 ಲೈವ್ ಕಾರ್ಟ್ರಿಡ್ಜ್‌ಗಳು, ವಾಕಿ-ಟಾಕಿಗಳು ಮತ್ತು ಕೆಲವು ಮಾರಕಾಯುಧಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.