ಆಸ್ಪತ್ರೆಯಿಂದ ಕುಮಾರಸ್ವಾಮಿ ಡಿಸ್ಚಾರ್ಜ್
Team Udayavani, Oct 3, 2017, 11:47 AM IST
ಬೆಂಗಳೂರು: ಹೃದಯ ಕವಾಟ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.
ಹತ್ತು ವರ್ಷಗಳ ಹಿಂದೆ ಅಳವಡಿಸಿದ್ದ ಸ್ಟಂಟ್ ಬದಲಾವಣೆಗಾಗಿ ಕಳೆದ ವಾರ ನಗರದ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಕುಮಾರಸ್ವಾಮಿ, ಈಗ ಪೂರ್ಣ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆಯಾಗಿ ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ತೆರಳಿದ್ದಾರೆ.
ಒಂದೆರಡು ದಿನ ನಿವಾಸದಲ್ಲಿ ವಿಶ್ರಾಂತಿ ಪಡೆದು ನಂತರ ಕುಮಾರಸ್ವಾಮಿ ಸಿಂಗಪುರಕ್ಕೆ ತೆರಳಿ ಅಲ್ಲಿ ಹದಿನೈದು ದಿನ ವಿಶ್ರಾಂತಿ ಪಡೆದು ಮರಳಲಿದ್ದಾರೆ.