‘ರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ಕಿಡಿ

Team Udayavani, Dec 3, 2021, 8:55 AM IST

siddaramaiah vs kumaraswamy

ಬೆಂಗಳೂರು: ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಹಾಲಿ-ಮಾಜಿ ಪ್ರಧಾನಿಗಳ ಭೇಟಿಯ ಬಗ್ಗೆ ಟೀಕೆ ಮಾಡಿದ್ದ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ  ʼಸಿದ್ದಕಲೆʼಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ?  ʼರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ. ʼರಾಜಕೀಯ ಆಶ್ರಯʼ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ʼಸಿದ್ದಸೂತ್ರಧಾರʼನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ ಎಂದು ಕಟು ಮಾತಿನಲ್ಲಿ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ:ಸಿದ್ದು v/s ದೊಡ್ಡ ಗೌಡರು; ಪ್ರಧಾನಿ ಜತೆಗಿನ ಭೇಟಿ ವಿಚಾರ ವಾಗ್ವಾದ

ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ʼಪಕ್ಷನಿಷ್ಠೆʼ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ʼಪರಮ ಅಪಥ್ಯʼ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು. ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ʼಸ್ವಾಹʼ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು ಎಂದು ಎಚ್ ಡಿಕೆ ಆರೋಪಿಸಿದ್ದಾರೆ.

ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! ʼಸಿದ್ದಸೂತ್ರಧಾರʼನಿಗೆ ಇದೆಲ್ಲ ಗೊತ್ತಿಲ್ಲವೇ? ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

1-gaa

‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾ ಬ್ಯಾನ್ ಮಾಡಲು ಕಾಂಗ್ರೆಸ್ ಮನವಿ

ಸವದತ್ತಿ ಮಹಿಳಾ ಪೇದೆ ಈಗ ಪಿಎಸೈ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

dk shi 2

ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿ

28accident

ಕೊರಟಗೆರೆ: ಬಸ್ ಅಪಘಾತ, ಇಬ್ಬರು ಸಾವು; ಎಂಟು ಮಂದಿ ಗಂಭೀರ

ಪಾತಾಳಕ್ಕೆ ಕುಸಿದ  ಸೆನ್ಸೆಕ್ಸ್; ಮುಂಬಯಿ ಷೇರುಪೇಟೆ ಸೂಚ್ಯಂಕ 1,546 ಅಂಕ ಇಳಿಕೆ

ಪಾತಾಳಕ್ಕೆ ಕುಸಿದ  ಸೆನ್ಸೆಕ್ಸ್; ಮುಂಬಯಿ ಷೇರುಪೇಟೆ ಸೂಚ್ಯಂಕ 1,546 ಅಂಕ ಇಳಿಕೆ

CM @ 2

ಜಿಲ್ಲಾ ಉಸ್ತುವಾರಿ ಬದಲಾವಣೆ: ತವರು ಜಿಲ್ಲೆ ಬಹುತೇಕ ಸಚಿವರಿಗೆ ಇಲ್ಲ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಥಮ ಪ್ರಯತ್ನದಲ್ಲೆ ಪಿಎಸ್‍ಐ ಆದ ಕಂಡಕ್ಟರ್ ಮಗ

ಪ್ರಥಮ ಪ್ರಯತ್ನದಲ್ಲೆ ಪಿಎಸ್‍ಐ ಆದ ಕಂಡಕ್ಟರ್ ಮಗ

ಸವದತ್ತಿ ಮಹಿಳಾ ಪೇದೆ ಈಗ ಪಿಎಸೈ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

dk shi 2

ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿ

accident

ಹಾವೇರಿ: ಲಾರಿ ಪಲ್ಟಿಯಾಗಿ ಮೂವರು ದಾರುಣ ಸಾವು

ಕರ ವಸೂಲಿಗಾರ್ತಿಗೆ ಸೀಮಂತ ಕಾರ್ಯ ನಡೆಸುವ ಮೂಲಕ ವಿಶ್ವ ಹೆಣ್ಣು ಮಕ್ಕಳ ದಿನ ಆಚರಣೆ

ಕರ ವಸೂಲಿಗಾರ್ತಿಗೆ ಸೀಮಂತ ಕಾರ್ಯ ನಡೆಸುವ ಮೂಲಕ ವಿಶ್ವ ಹೆಣ್ಣು ಮಕ್ಕಳ ದಿನ ಆಚರಣೆ

MUST WATCH

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

udayavani youtube

ರಾಷ್ಟ್ರೀಯ ಬಾಲ ಪುರಸ್ಕಾರ : ಪ್ರಧಾನಿ ಜೊತೆ ಮಂಗಳೂರಿನ ರೆಮೋನಾ ಪರೇರಾ ಮಾತುಕತೆ

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

udayavani youtube

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

ಹೊಸ ಸೇರ್ಪಡೆ

ಪ್ರಥಮ ಪ್ರಯತ್ನದಲ್ಲೆ ಪಿಎಸ್‍ಐ ಆದ ಕಂಡಕ್ಟರ್ ಮಗ

ಪ್ರಥಮ ಪ್ರಯತ್ನದಲ್ಲೆ ಪಿಎಸ್‍ಐ ಆದ ಕಂಡಕ್ಟರ್ ಮಗ

1-gaa

‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾ ಬ್ಯಾನ್ ಮಾಡಲು ಕಾಂಗ್ರೆಸ್ ಮನವಿ

ಸವದತ್ತಿ ಮಹಿಳಾ ಪೇದೆ ಈಗ ಪಿಎಸೈ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

dk shi 2

ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿ

2718 ಹೆಕ್ಟೇರ್‌ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ

2718 ಹೆಕ್ಟೇರ್‌ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.