ಈ ಬಾರಿ ಪುನೀತ್ ರಾಜಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫ್ಲವರ್ ಶೋ: ಮುನಿರತ್ನ
Team Udayavani, Jul 12, 2022, 1:10 PM IST
ಬೆಂಗಳೂರು: ಈ ವರ್ಷ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ನಡೆಯಲಿದೆ. ಆಗಸ್ಟ್ 5 ರಿಂದ 15 ವರೆಗೆ ನಡೆಯಲಿರುವ ಫ್ಲವರ್ ಶೋ ದಿ. ನಟ ಪುನೀತ್ ರಾಜಕುಮಾರ್ ಹೆಸರಿನಲ್ಲಿ ನಡೆಯಲಿದೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಫ್ಲವರ್ ಶೋವನ್ನು ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ. ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಫ್ಲವರ್ ಶೋ ನಡೆಸಲಾಗುವುದು ಎಂದರು.
ಆಗಸ್ಟ್ ಹದಿನೈದರ ಬಳಿಕ ಒಂದೆರಡು ದಿನಗಳ ಕಾಲ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ:ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆ ಅಬ್ಬರ; ಮಳೆ ನಿಲ್ಲಿಸುವಂತೆ ಮಳೆ ದೇವರಿಗೆ ವಿಶೇಷ ಪೂಜೆ
ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆ ನಷ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಮುನಿರತ್ನ, ಸಂಪೂರ್ಣ ವರದಿಯನ್ನು ಅಧಿಕಾರಿಗಳು ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ಏನೇನು ನಷ್ಟ ಉಂಟಾಗಿದೆಯೋ ಅದನ್ನು ಗಮನಿಸುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜೊತೆ ಇದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ