ಬಿಜೆಪಿ ವಲಸಿಗ ಶಾಸಕರಲ್ಲೇ ಭಿನ್ನರಾಗ: ತಡರಾತ್ರಿ ಮೀಟಿಂಗ್, ‘ನಾಯಕ’ರ ವಿರುದ್ಧ ಆಕ್ರೋಶ
Team Udayavani, Nov 28, 2020, 8:27 AM IST
ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಶಾಸಕರಲ್ಲಿ ಇದೀಗ ಭಿನ್ನಮತ ಆರಂಭವಾಗಿದೆ. ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಲಾಬಿ, ಪರ ವಿರೋಧಗಳು ಈ ಹೊಸ ಬೆಳವಣಿಗೆಗೆ ಕಾರಣವಾಗಿದೆ.
ಶುಕ್ರವಾರ ರಾತ್ರಿ ಈ ವಲಸಿಗ ತಂಡ ಸಭೆ ಸೇರಿ ಚರ್ಚೆ ನಡೆಸಿದೆ. ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ರಿಗೆ ಸಚಿವ ಸ್ಥಾನ ನೀಡಲು ಲಾಬಿಮಾಡುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಮೇಶ್ ಜಾರಕಿಹೊಳಿ ಅವರು ತಮ್ಮನ್ನು ತಾವು ವಲಸಿಗರ ನಾಯಕನಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮೈತ್ರಿ ತಂಡ ಕಿಡಿಕಾರಿದೆ.
ಇದನ್ನೂ ಓದಿ:ಆನ್‌ಲೈನ್ ತರಗತಿಗಿಲ್ಲ ತಡೆ : 15 ದಿನಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಮನವಿ
ನಾವೆಲ್ಲಾ ಒಗ್ಗಟ್ಟಾಗಿರಬೇಕು. ಯಡಿಯೂರಪ್ಪ ನಾಯಕತ್ವ ಕ್ಕೆ ಬೆಂಬಲವಾಗಿರಬೇಕು. ನಮ್ಮೊಂದಿಗೆ ಬಂದವರನ್ನು ಮಂತ್ರಿ ಮಾಡಲು ಪ್ರಯತ್ನಿಸಬೇಕೆಂದು ನಿರ್ಧಾರ ಸಭೆಯಲ್ಲಿ ನಿರ್ಧಾರ ಮಾಡಲಾಯಿತು.
ಸದ್ಯ ಹೈದರಾಬಾದ್ ನಲ್ಲಿರುವ ಆರೋಗ್ಯ ಸಚಿವ ಕೆ ಸುಧಾಕರ್ ಸಭೆಗೆ ಗೈರಾಗಿದ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ರಾಜೀನಾಮೆ ನೀಡಿದ್ದ 17 ಶಾಸಕರಲ್ಲಿ 16 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಮೇಶ್ ಜಾರಕಿಹೊಳಿ, ಎಚ್ ವಿಶ್ವನಾಥ್, ಪ್ರತಾಪ್ ಗೌಡ ಪಾಟೀಲ್, ಶಿವರಾಂ ಹೆಬ್ಬಾರ್, ಬಿಸಿ ಪಾಟೀಲ್, ಮಹೇಶ್ ಕುಮಟಳ್ಳಿ, ಆನಂದ್ ಸಿಂಗ್, ಕೆ ಸುಧಾಕರ್, ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಮುನಿರತ್ನ, ಗೋಪಾಲಯ್ಯ, ನಾರಾಯಣ ಗೌಡ, ಆರ್. ಶಂಕರ್, ಶ್ರೀಮಂತ್ ಪಾಟೀಲ್ ಮತ್ತು ಎಂಟಿಬಿ ನಾಗರಾಜ್ ಬಿಜೆಪಿಗೆ ಸೇರ್ಪಡೆಯಾದವರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444