Udayavni Special

ಗುತ್ತಿಗೆ ಅವಧಿ ಪೂರ್ಣ: ಗಣಿ ಉದ್ಯಮಿಗಳ ಕಳವಳ


Team Udayavani, Jul 21, 2019, 3:04 AM IST

guttige

ಬೆಂಗಳೂರು: ಬರುವ 2020ರ ವೇಳೆಗೆ ಅತಿ ಹೆಚ್ಚು ಅದಿರು ಉತ್ಪಾದನೆ ಮಾಡುವ ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ವಿವಿಧ ಖನಿಜಗಳ ಗಣಿಗಾರಿಕೆಗೆ ಸಂಬಂಧಿಸಿದ ಗುತ್ತಿಗೆ ಅವಧಿ ಪೂರ್ಣಗೊಳ್ಳಲಿದ್ದು, ಇದು ಗಣಿ ಉದ್ಯಮದ ಬೆಳವಣಿಗೆಗೆ ದೊಡ್ಡ ತೊಡಕಾಗಲಿದೆ ಎಂದು ಉದ್ಯಮಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಭಾರತೀಯ ಗಣಿ ಎಂಜಿನಿಯರ್‌ಗಳ ಸಂಘ ಬೆಂಗಳೂರು ಘಟಕ ಬಿಡುಗಡೆ ಮಾಡಿದ “ಖನಿಜಗಳ ಗಣಿಗಾರಿಕೆ- 2020ರ ಆಚೆಗೆ’ ಕುರಿತ ಕಿರುಹೊತ್ತಿಗೆಯಲ್ಲಿ ಉದ್ಯಮಿಗಳು ಈ ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಜಾರ್ಖಂಡ್‌, ಒರಿಸ್ಸಾ, ಛತ್ತೀಸಗಢ ಮತ್ತಿತರ ಪ್ರಮುಖ ರಾಜ್ಯಗಳಲ್ಲಿ ಹತ್ತಾರು ಕ್ವಾರಿಗಳ ಗುತ್ತಿಗೆ ಅವಧಿ 2020ರ ಮಾರ್ಚ್‌ಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಅಲ್ಲೆಲ್ಲಾ ಗಣಿಗಾರಿಕೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಈ ರಾಜ್ಯಗಳಿಂದ ವಾರ್ಷಿಕ ಸುಮಾರು 30ರಿಂದ 40 ಟನ್‌ ಕಬ್ಬಿಣದ ಅದಿರು ಉತ್ಪಾದನೆಯಾಗುತ್ತಿದೆ. ಒಂದು ವೇಳೆ ಸ್ಥಗಿತಗೊಂಡರೆ, ಇದರಿಂದ ಬೇಡಿಕೆ ಮತ್ತು ಪೂರೈಕೆ ಅಂತರ ಹೆಚ್ಚಲಿದ್ದು, ಉದ್ಯಮದ ಮೇಲೆ ಪರಿಣಾಮ ಬೀರುವ ನಿರೀಕ್ಷೆ ಎಂದು ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕ್ವಾರಿಗಳು ಸ್ಥಗಿತಗೊಳ್ಳುವುದರಿಂದ ಕೇವಲ ಅದಿರು ಪೂರೈಕೆಯಲ್ಲಿ ಕುಸಿತ ಆಗುವುದಿಲ್ಲ; ಸಾವಿರಾರು ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಈ ಮೂಲಕ ಅವಲಂಬಿತ ಕುಟುಂಬಗಳ ಮೇಲೂ ಪರಿಣಾಮ ಬೀರಲಿದೆ. ಕರ್ನಾಟಕದಲ್ಲಿ “ಸಿ’ ಕೆಟಗರಿಯ ಒಟ್ಟಾರೆ 22 ಕ್ವಾರಿಗಳನ್ನು ಲೀಸ್‌ಗೆ ನೀಡುವ ಪ್ರಸ್ತಾವನೆ ಇದ್ದು, ಈ ಪೈಕಿ ಇದುವರೆಗೆ 14 ಕ್ವಾರಿಗಳನ್ನು ಹರಾಜು ಮೂಲಕ ಗುತ್ತಿಗೆ ನೀಡುವ ಪ್ರಕ್ರಿಯೆ ಮುಗಿದಿದೆ. ಆದರೆ, ಅದರಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ವಾರಿಗಳ ಸಂಖ್ಯೆ ಕೇವಲ ಮೂರರಿಂದ ನಾಲ್ಕು. ಈ ಕ್ವಾರಿಗಳ ಗುತ್ತಿಗೆ ಅವಧಿ ಕೂಡ 2020ರ ಮಾರ್ಚ್‌ ವೇಳೆ ಅಂತ್ಯಗೊಳ್ಳಲಿದೆ ಎಂದು “2020ರ ನಂತರ ಕರ್ನಾಟಕದ ಚಿತ್ರಣ’ ಕುರಿತು ಲೇಖನ ಬರೆದ ಉದ್ಯಮಿ ಬಿ.ಪಿ. ಪಾಂಡೆ ತಿಳಿಸಿದ್ದಾರೆ.

40 ಮೆಟ್ರಿಕ್‌ ಟನ್‌ ಗುರಿ: ಇದಕ್ಕೂ ಮುನ್ನ ನಡೆದ “ಖನಿಜಗಳ ಗಣಿಗಾರಿಕೆ-2020ರ ಆಚೆಗೆ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಎನ್‌.ಎಸ್‌. ಪ್ರಸನ್ನ ಕುಮಾರ್‌ ಮಾತನಾಡಿ, “ರಾಜ್ಯದಲ್ಲಿ 14 ಗಣಿ ಕ್ವಾರಿಗಳನ್ನು ಗುತ್ತಿಗೆ ನೀಡಲಾಗಿದ್ದು, ಈ ಪೈಕಿ ನಾಲ್ಕರಲ್ಲಿ ಈಗಾಗಲೇ ಗಣಿಗಾರಿಕೆ ಆರಂಭವಾಗಿದೆ. ಆಗಸ್ಟ್‌ ಅಂತ್ಯಕ್ಕೆ ಇನ್ನುಳಿದ ಹತ್ತರಲ್ಲಿ ಕಾರ್ಯಾರಂಭ ಆಗಲಿದ್ದು, ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೆ 40 ಮೆಟ್ರಿಕ್‌ ಟನ್‌ ಅದಿರು ಉತ್ಪಾದನೆ ಗುರಿ ಇದೆ ಎಂದು ಮಾಹಿತಿ ನೀಡಿದರು.

ವಾಣಿಜ್ಯ ಮತ್ತು ಕೈಗಾರಿಕೆ (ಗಣಿ) ಕಾರ್ಯದರ್ಶಿ ಎಂ. ಮಹೇಶ್ವರರಾವ್‌, “2020ರ ನಂತರ ಕೆಲವು ಗಣಿ ಗುತ್ತಿಗೆ ಅವಧಿ ಪೂರ್ಣಗೊಳ್ಳಲಿದೆ. ಇದರಿಂದ ಅದಿರು ಉತ್ಪಾದನೆ ಕುಂಠಿತಗೊಂಡು, ಬೇಡಿಕೆ ಮತ್ತು ಪೂರೈಕೆಯಲ್ಲಿ ವ್ಯತ್ಯಾಸ ಆಗಲಿದೆ. ಪರಿಣಾಮ ಬೆಲೆ ಏರಿಕೆ ಆಗಲಿದೆ ಎಂಬ ಆತಂಕ ಇದೆ. ಆದರೆ, ಈ ಬಗ್ಗೆ ಆತಂಕ ಬೇಡ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ’ ಎಂದರು.

ಭಾರತೀಯ ಭೂವಿಜ್ಞಾನ ಸೊಸೈಟಿ ಕಾರ್ಯದರ್ಶಿ ಆರ್‌.ಎಚ್‌. ಸಾವಕಾರ ಮಾತನಾಡಿ, ಗಣಿಗಾರಿಕೆಗೆ ಗುತ್ತಿಗೆ ನೀಡುವ ಮೊದಲೇ ಸ್ಥಳೀಯ ಅಭಿಪ್ರಾಯ ಸಂಗ್ರಹ, ಪರಿಸರ ಮತ್ತು ಅರಣ್ಯ ಸೇರಿದಂತೆ ಅಗತ್ಯ ಅನುಮತಿಗಳನ್ನು ಪಡೆದು, ತ್ವರಿತಗತಿಯಲ್ಲಿ ಪರವಾನಗಿ ನೀಡಬೇಕು. ಗುತ್ತಿಗೆ ನೀಡಿದ ನಂತರ ಅನುಮತಿಗಳಿಗೆ ಓಡಾಡುವಂತಾಗಬಾರದು ಎಂದು ಸೂಚ್ಯವಾಗಿ ಹೇಳಿದರು. ಪದಾಧಿಕಾರಿಗಳಾದ ಡಾ.ಟಿ.ಎನ್‌. ವೇಣುಗೋಪಲ್‌, ಕೆ. ಮಧುಸೂದನ, ದೀಪಕ್‌ ವಿದ್ಯಾರ್ಥಿ ಮತ್ತಿತರರು ಉಪಸ್ಥಿತರಿದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; “ನಂಬಿಕಸ್ಥ” ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ “ನಂಬಿಕಸ್ಥ” ಪಟ್ಟ

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ವಾರ್ನರ್ ಪಡೆಗೆ 88 ರನ್ ಗಳ ಗೆಲುವು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ಡೇವಿಡ್‌ ವಾರ್ನರ್‌ಗೆ ಗೆಲುವಿನ ಗಿಫ್ಟ್‌

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗಳಗಂಟ ಸರಕಾರಗಳಿಂದ ಅಭಿವೃದ್ಧಿಗೆ ಹಿನ್ನಡೆ: ಡಿಸಿಎಂ

ಜಗಳಗಂಟ ಸರಕಾರಗಳಿಂದ ಅಭಿವೃದ್ಧಿಗೆ ಹಿನ್ನಡೆ: ಡಿಸಿಎಂ

ನಿಮ್ಮ ಕಷ್ಟ , ಸುಖ ಹಂಚಿಕೊಳ್ಳಲು ಒಂದು ಅವಕಾಶ ನೀಡಿ: ಕುಸುಮಾ

ನಿಮ್ಮ ಕಷ್ಟ , ಸುಖ ಹಂಚಿಕೊಳ್ಳಲು ಒಂದು ಅವಕಾಶ ನೀಡಿ: ಕುಸುಮಾ

ಸಮ್ಮಿಶ್ರ ಸರ್ಕಾರಗಳಿಂದ ಜೆಡಿಎಸ್‍ಗೆ ಹೊಡೆತ: ವೈಎಸ್‍ವಿ ದತ್ತ

ಸಮ್ಮಿಶ್ರ ಸರ್ಕಾರಗಳಿಂದ ಜೆಡಿಎಸ್‍ಗೆ ಹೊಡೆತ: ವೈಎಸ್‍ವಿ ದತ್ತ

ಮಲೆ ಮಹದೇಶ್ವರ ಬೆಟ್ಟ: ಭಕ್ತಾದಿಗಳ ನಿಷೇಧದ ನಡುವೆಯೂ ಸರಳ ಮತ್ತು ಸಂಭ್ರಮದ ತೆಪ್ಪೋತ್ಸವ

ಮಲೆ ಮಹದೇಶ್ವರ ಬೆಟ್ಟ: ಭಕ್ತಾದಿಗಳ ನಿಷೇಧದ ನಡುವೆಯೂ ಸರಳ ಮತ್ತು ಸಂಭ್ರಮದ ತೆಪ್ಪೋತ್ಸವ

ಮತದಾರರ ಬೆನ್ನಿಗೆ ಚೂರಿ ಹಾಕಿದವರಿಗೆ ಪಾಠ ಕಲಿಸಿ: ಸಿದ್ದರಾಮಯ್ಯ

ಮತದಾರರ ಬೆನ್ನಿಗೆ ಚೂರಿ ಹಾಕಿದವರಿಗೆ ಪಾಠ ಕಲಿಸಿ: ಸಿದ್ದರಾಮಯ್ಯ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!ಹೊಸ ಸೇರ್ಪಡೆ

ಮುಂಗಾರು ಬೆಳೆ ಸಮೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 100 ಸಾಧನೆ

ಮುಂಗಾರು ಬೆಳೆ ಸಮೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 100 ಸಾಧನೆ

ಸ್ವೋದ್ಯೋಗಕ್ಕೆ ಜೀವಾಮೃತವಾದ ಕೃಷಿ ಕಾಯಕ

ಸ್ವೋದ್ಯೋಗಕ್ಕೆ ಜೀವಾಮೃತವಾದ ಕೃಷಿ ಕಾಯಕ

ಕಟಪಾಡಿ : ಶಿಥಿಲಾವಸ್ಥೆಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕಟಪಾಡಿ : ಶಿಥಿಲಾವಸ್ಥೆಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.