ಪಂಚಮಸಾಲಿ ಮೀಸಲಾತಿಗೆ ಕಾನೂನು ಹೋರಾಟ
Team Udayavani, Aug 25, 2022, 9:31 PM IST
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ 2 ಎ ಮೀಸಲಾತಿ ಹಾಗೂ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಕಾನೂನು ಹೋರಾಟ ಮುಂದುವರಿಸಲು ಕರ್ನಾಟಕ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ನಿರ್ಧರಿಸಿದೆ.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನಿವಾಸದಲ್ಲಿ ಪಂಚಮಸಾಲಿ ಸಮುದಾಯದ ನಾಯಕರ ಸಭೆ ನಡೆಸಿ, ಮೀಸಲಾತಿಗಾಗಿ ಸಾರ್ವಜನಿಕ ಹೋರಾಟದ ಜೊತೆಗೆ ಕಾನೂನು ಹೋರಾಟ ನಡೆಸಲು ತಿರ್ಮಾನ ಮಾಡಲಾಗಿದೆ. ಹೋರಾಟಕ್ಕೆ ಬೆಂಬಲ ನೀಡುವಂತೆ ಸಂಘದ ಪ್ರಮುಖರಿಂದ ಸಚಿವ ಮುರುಗೇಶ್ ನಿರಾಣಿ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಪಂಚಮಸಾಲಿಗಳನ್ನು ಸೇರ್ಪಡೆ ಮಾಡಬೇಕು ಹಾಗೂ ರಾಜ್ಯದಲ್ಲಿ 2 ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು. ಸಭೆಯ ಬಳಿಕ ಪಂಚಮಸಾಲಿ ಸಂಘದ ಅಧ್ಯಕ್ಷ ಜಿ.ಪಿ.ಪಾಟೀಲ್ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ನೀಡಬೇಕು. ರಾಜ್ಯ ಸರ್ಕಾರ ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗಮನಕ್ಕೆ ತಂದಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೀಸಲಾತಿ ಸಿಗುವವರೆಗೂ ಕಾನೂನು ಹೋರಾಟ ಕೂಡ ಮುಂದುವರಿಯುತ್ತದೆ. ನಮಗೆ ಸಚಿವ ಮುರುಗೇಶ ನಿರಾಣಿ ಎಲ್ಲ ಸಹಕಾರ ಕೊಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ
Hassan Pen Drive Case ರೇವಣ್ಣಗೆ ಕಿಡ್ನಾಪ್ ಕೇಸ್, ಲುಕ್ಔಟ್ ನೋಟಿಸ್ ಕಂಟಕ
HD Revanna ಫಾರ್ಮ್ ಹೌಸ್ನಲ್ಲಿ ಎಸ್ಐಟಿ ತಂಡ ಪರಿಶೀಲನೆ
Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ