ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ


Team Udayavani, Jun 10, 2023, 1:21 PM IST

tejasvi surya

ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್ ಲೈನ್ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ, ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ರಾಜಕೀಯ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆಗಳು ಸಿಕ್ಕಿವೆ ಎಂದು ತಿಳಿಸಿದರು.

ಕಾನೂನು ಪ್ರಕೋಷ್ಠದವರು ಈ ಹಿನ್ನೆಲೆಯಲ್ಲಿ ಯೋಗೇಂದ್ರ ಮತ್ತು ಅವರ 100 ವಕೀಲರ ತಂಡವು ಸಹಾಯವಾಣಿ ಉದ್ಘಾಟಿಸುತ್ತಿದೆ ಎಂದು ಅವರು ತಿಳಿಸಿದರು. ಸದನದ ಒಳಗೆ ಮತ್ತು ಹೊರಗೆ ಇಂಥ ದೌರ್ನಜ್ಯದ ವಿರುದ್ಧ ಹೋರಾಟ ಸಂಘಟಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಹೋರಾಟದ ಮೂಲಕವೇ ಬಿಜೆಪಿ ಬೆಳೆದುಬಂದಿದೆ. ಈ ಪಕ್ಷದ ದಮನ ಇವತ್ತಿನದಲ್ಲ. ಇಂಥ ದ್ವೇಷವನ್ನು ಎದುರಿಸಿಯೇ ನಮ್ಮ ಪಕ್ಷ ಮುಂದುವರಿದಿದೆ. ನಮ್ಮ ಕಾರ್ಯಕರ್ತರು ವಿಶ್ವಾಸ- ಧೈರ್ಯ ಕಳೆದುಕೊಳ್ಳಬಾರದು. ಪಕ್ಷವು ಅನ್ಯಾಯ, ಅವ್ಯವಸ್ಥೆ ವಿರುದ್ಧ ಹೋರಾಟ ಮಾಡೋಣ ಎಂದು ಕಿವಿಮಾತು ಮತ್ತು ಧೈರ್ಯ ಹೇಳಿದರು. ದೌರ್ಜನ್ಯ ನಡೆದರೆ, ಸುಳ್ಳು ಕೇಸು ಹಾಕಿದರೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತರ ಒಳಿತು ಮತ್ತು ಅವರ ಹಕ್ಕುಗಳ ರಕ್ಷಣೆಯ ದೃಷ್ಟಿಯಿಂದ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಹೈಕೋರ್ಟ್ ಪೀಠವಿರುವ ಎಲ್ಲ ಜಾಗಗಳಲ್ಲಿ ಕಾನೂನು ಪ್ರಕೋಷ್ಠದ ಕಾರ್ಯಕರ್ತರು ಮತ್ತು ವಕೀಲರ ತಂಡದ ರಚನೆ ಆಗಿದೆ. ರಾಜ್ಯದ ನೂರಕ್ಕೂ ಹೆಚ್ಚು ವಕೀಲರು ಈ ಸಹಾಯವಾಣಿಯ ನಿರ್ವಹಣೆ ಮಾಡಲು ಸಹಕರಿಸುತ್ತಾರೆ ಎಂದು ತಿಳಿಸಿದರು.

ನಮ್ಮ ಕಾರ್ಯಕರ್ತರು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರೆ ಅವರು ಕೆಲಸ ಕಳಕೊಳ್ಳುವಂತೆ ಮಾಡುವ ಪ್ರಯತ್ನ ಹಿಂದೆ ಆಗಿತ್ತು ಎಂದು ಆರೋಪಿಸಿದರು. ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಆದಾಗ ಎಫ್‍ಐಆರ್ ನೋಂದಣಿ ವೇಳೆ ವಿಳಂಬ ಮಾಡಲಾಗುತ್ತಿತ್ತು. ದೋಷಾರೋಪ ಪಟ್ಟಿ ಸಲ್ಲಿಸುವಾಗ ಅದನ್ನು ಸಮರ್ಪಕವಾಗಿ ಸಲ್ಲಿಸುತ್ತಿರಲಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ಸಿನ ಈ ಸರಕಾರದಲ್ಲೂ ಪ್ರಮುಖ ಸಚಿವರು ಬ್ಯಾಕ್‍ಗ್ರೌಂಡ್ ಸೆಟ್ಟಿಂಗ್ ಮಾಡುವ ಹೇಳಿಕೆ ಕೊಡುತ್ತಿದ್ದಾರೆ. ನಾಳೆ ರಾಜಕೀಯ ದ್ವೇಷದಿಂದ ಮಾಡುವ ಬಂಧನಗಳಿಗೆ ಈಗಿನಿಂದ ವೇದಿಕೆ ಸಿದ್ಧಪಡಿಸುವ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯದ ಗೃಹಸಚಿವರು ಕರಾವಳಿ ಭಾಗದಲ್ಲಿ ಅತ್ಯಂತ ಪೂರ್ವಾಗ್ರಹದಿಂದ ಹೇಳಿಕೆ ಕೊಟ್ಟಿದ್ದಾರೆ. ಆ ಭಾಗದಲ್ಲಿ ಕೆಲಸ ಮಾಡುವ ಸಾಂಸ್ಕೃತಿಕ ಸಂಘಟನೆಗಳನ್ನು ಹತ್ತಿಕ್ಕಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸುವುದಾಗಿ ಹೇಳಿದ್ದಾರೆ ಎಂದು ಆಕ್ಷೇಪಿಸಿದರು.

ಹಬ್ಬಗಳ ಮೆರವಣಿಗೆಗೂ ಅವಕಾಶ ಇಲ್ಲ: ಸಂವಿಧಾನದಲ್ಲಿ ರಾಜಕೀಯ ಪಕ್ಷಕ್ಕೆ ಕೊಟ್ಟ ಅವಕಾಶದಂತೆ ನಡೆದುಕೊಂಡರೂ ಸುಳ್ಳು ಕೇಸು ಹಾಕಿದ್ದರು. ಗಣಪತಿ ಹಬ್ಬ, ಯುಗಾದಿ, ರಾಮನವಮಿ, ಹನುಮ ಜಯಂತಿಯ ಸಂದರ್ಭದಲ್ಲೂ ಮೆರವಣಿಗೆಗೆ ಅವಕಾಶ ಕೊಟ್ಟಿರಲಿಲ್ಲ. ಆಗಲೂ ಕೋರ್ಟಿಗೆ ಹೋಗಿ ಅನುಮತಿ ಪಡೆದು ರ್ಯಾಲಿ, ಮೆರವಣಿಗೆ, ಶೋಭಾಯಾತ್ರೆ ಮಾಡಬೇಕಾದ ಪರಿಸ್ಥಿತಿ ಬಂದಿತ್ತು ಎಂದು ತೇಜಸ್ವಿ ಸೂರ್ಯ ಅವರು ಆರೋಪಿಸಿದರು.

ಕಾಂಗ್ರೆಸ್ ಸರಕಾರವು ಈ ಹಿಂದಿನ ಅವಧಿಯಲ್ಲಿ ಅಧಿಕಾರದಲ್ಲಿ ಇದ್ದಾಗ ಫೇಸ್ ಬುಕ್‍ನಲ್ಲಿ ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಟೀಕಿಸಿ ಪೋಸ್ಟ್ ಹಾಕಿದ ಕಾರಣಕ್ಕೆ ಕೇಸು ಹಾಕಿಸಿ ಅವರನ್ನು ಬಂಧಿಸಲಾಗುತ್ತಿತ್ತು. ವಾಟ್ಸ್ ಆ್ಯಪ್‍ಗೆ ಕಾರ್ಟೂನ್, ಮೀಮ್ ಅನ್ನು ಹಂಚಿಕೊಂಡಾಗ ಸರಕಾರದ ಕಡೆಯಿಂದ ಪೊಲೀಸರನ್ನು ಕಳಿಸಿ ಬಂಧಿಸುವ ಕೆಲಸ ನಡೆದಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

SAVADI

BSY ಜೈಲಿಗೆ ಹೋಗಲು ಎಚ್ಡಿಕೆ ಕಾರಣ: ಸವದಿ

sthiraasthi

Karnataka: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

beg

Pakistani: ಅರಬ್‌ ರಾಷ್ಟ್ರಗಳಲ್ಲಿ ಪಾಕ್‌ ಭಿಕ್ಷುಕರ ಸಾಮ್ರಾಜ್ಯ!

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

ny rain

Rain: ದಿಢೀರ್‌ ಪ್ರವಾಹಕ್ಕೆ ನ್ಯೂಯಾರ್ಕ್‌ ತತ್ತರ

AADITYA L 1

Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್‌1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.