ದೇಶದೆಲ್ಲೆಡೆ ಏಕರೂಪದ ವಾಹನ ತೆರಿಗೆ ಅಧಿವೇಶನದಲ್ಲಿ ಕಾನೂನು

Team Udayavani, Jan 29, 2020, 3:06 AM IST

adhiveshana

ಬೆಂಗಳೂರು: ಕೇಂದ್ರ ಸರ್ಕಾರವು ಒನ್‌ ನೇಷನ್‌ ಒನ್‌ ಟ್ಯಾಕ್ಸ್‌ ತರಲು ನಿರ್ಧರಿಸಿರುವುದರಿಂದ ರಾಜ್ಯ ಸರ್ಕಾರವೂ ಮುಂದಿನ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಹೆಚ್ಚು ಬೆಲೆಯುಳ್ಳ ವಾಹನಗಳ ನೋಂದಣಿ ಬೇರೆ ಬೇರೆ ರಾಜ್ಯಗಳಲ್ಲಿ ಮಾಡಿ ಇಲ್ಲಿಗೆ ತರುತ್ತಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಲ್ಲೂ ಒಂದೇ ರೀತಿಯ ತೆರಿಗೆ ಪದ್ಧತಿ ಜಾರಿಗೊಳಿಸಲು ಮುಂದಾಗಿದೆ ಎಂದರು. ಕೇಂದ್ರ ಸರ್ಕಾರದ ಕ್ರಮಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕಾನೂನು ರೂಪಿಸಿ ವಿಧಾನಮಂಡಲದ ಒಪ್ಪಿಗೆ ಪಡೆಯಲಿದೆ ಎಂದು ಹೇಳಿದರು.

ಒನ್‌ ನೇಷನ್‌ ಒನ್‌ ಟ್ಯಾಕ್ಸ್‌ ಪದ್ಧತಿ ಜಾರಿಗೆ ಬಂದರೆ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಕೊರತೆ ಆಗಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರವು ಶೇ.16, 18, ಹಾಗೂ 20 ಮೂರು ಸ್ಲಾéಬ್‌ಗಳಲ್ಲಿ ತೆರಿಗೆ ಹಾಕುತ್ತಿದೆ. ಕೇಂದ್ರ ಸರ್ಕಾರವು ಶೇ.8, 12, 10 ರಷ್ಟು ತೆರಿಗೆ ಹಾಕುತ್ತಿದೆ. ಹೀಗಾಗಿ, ಕೊರತೆಯಾಗಬಹುದು. ಆದರೆ, ಅದಕ್ಕೆ ಪರಿಹಾರೋಪಾಯ ಕಂಡು ಹಿಡಿಯಲಾಗುವುದು ಎಂದು ತಿಳಿಸಿದರು.

ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ನೌಕರರ ಮುಷ್ಕರ ಕುರಿತು ಪ್ರತಿಕ್ರಿಯಿಸಿದ ಅವರು, 1.30 ಲಕ್ಷ ಚಾಲಕರು ಹಾಗೂ ನಿರ್ವಾಹಕರು ಕೆಲಸ ಮಾಡುತ್ತಿದ್ದಾರೆ. ಅವರು ನಮ್ಮನ್ನೂ ಸರ್ಕಾರಿ ನೌಕರರು ಅಂತ ಪರಿಗಣಿಸಲು ಬೇಡಿಕೆ ಇದೆ. ಈ ಬಗ್ಗೆ ಸಮಿತಿ ರಚಿಸಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದು ಹೇಳಿದರು.

ಹೊಸ ಬಸ್‌ ಖರೀದಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 1200 ಹೊಸ ಬಸ್‌ಗಳ ಖರೀದಿಗೆ ತೀರ್ಮಾನಿಸಲಾಗಿದೆ. ಆ ಪೈಕಿ 356 ಬಸ್‌ ಬಿಎಂಟಿಸಿಗೂ ಲಭ್ಯವಾಗಲಿವೆ. ಎಲೆಕ್ಟ್ರಿಕ್‌ ಬಸ್‌ ಖರೀದಿ ಸಂಬಂಧ ಒಂದು ಸಂಸ್ಥೆ ಮುಂದೆ ಬಂದಿತ್ತು. ಆದರೆ, ಸಿಂಗಲ್‌ ಟೆಂಡರ್‌ ಮಾತ್ರ ಆಗಿ ದರದಲ್ಲಿ ನಮಗೆ ಸಮಾಧಾನವಾಗಲಿಲ್ಲ. ಹೀಗಾಗಿ, ಟೆಂಡರ್‌ ರದ್ದುಪಡಿಸಿ ಮರು ಟೆಂಡರ್‌ ಕರೆದಿದ್ದೇವೆ. 300 ಎಲೆಕ್ಟ್ರಿಕ್‌ ಬಸ್‌ ಬಂದರೆ ಬೆಂಗಳೂರಿನ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.