
ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್, ಬಿಬಿಸಿ ಅರ್ಥ್ ವಾಹಿನಿ ಕನ್ನಡಲ್ಲಿ ಬರಲಿ: ಸಚಿವ ಸುನಿಲ್ ಪತ್ರ
Team Udayavani, Nov 29, 2022, 3:12 PM IST

ಬೆಂಗಳೂರು: ಜ್ಞಾನ ಪ್ರಸಾರ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುವಂತೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್ ಠಾಕೂರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.
ಈ ವಾಹಿನಿಗಳು ತಮಿಳು, ತೆಲುಗು, ಹಿಂದಿಯಲ್ಲಿ ಡಬ್ಬಿಂಗ್ ಆಗಿ ಅಂದಿನಿಂದ ಪ್ರಸಾರವಾಗುತ್ತಿದ್ದು, ಭೂ ಜೀವ ಜಗತ್ತಿನ ಅದ್ಭುತ ಸುಂದರ ವಿಷಯಗಳೆಲ್ಲಾ ಅಲ್ಲಿನ ಜನಗಳಿಗೆ ಅವರ ಅವರ ಪ್ರಾದೇಶಿಕ ಭಾಷೆಗಳಲ್ಲಿ ದೊರಕುತ್ತಿವೆ. ಈ ಭೂಮಿಯ ಮೇಲಿನ ಜೀವಜಗತ್ತಿನ ಅದ್ಭುತ ವೈವಿಧ್ಯತೆಗಳನ್ನು ವೈಚಿತ್ರಗಳನ್ನು ಅವುಗಳ ನಿಗೂಢ ಜೀವನ ಕ್ರಮಗಳನ್ನು ಹಾಗೂ ಅವುಗಳೆಲ್ಲಾ ಅಳಿವಿನಂಚಿಗೆ ಹೋಗುತ್ತಿರುವ ಭೀಕರತೆಗಳನ್ನೆಲ್ಲ ಜಗತ್ತಿನ ಎಲ್ಲ ಜನಗಳು ಅವರವರ ಮಾತೃಭಾಷೆಗಳಲ್ಲಿ ಅರಿತುಕೊಳ್ಳುವ ಅನಿವಾರ್ಯತೆ ಇದೆ. ಆದರೆ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡ ಭಾಷೆಯಲ್ಲಿ ಪ್ರಸಾರವಾಗದೇ ಇರುವುದರಿಂದ ಅದರಲ್ಲಿ ಜೀವ ವೈವಿಧ್ಯದ ಜ್ಞಾನ ಕನ್ನಡಿಗರನ್ನು ತಲುಪುತ್ತಿಲ್ಲ. ಆದ್ದರಿಂದ ಈ ವಾಹಿನಿಗಳು ಕನ್ನಡದಲ್ಲಿ ಪ್ರಸಾರವಾಗಬೇಕೆಂದು ಕನ್ನಡಿಗರು ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದು ಸಚಿವ ಸುನಿಲ್ ಕುಮಾರ್ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನದ ಹಲವು ಸ್ವರೂಪಗಳ ಆವಿಷ್ಕಾರದಿಂದಾಗಿ ಜಗತ್ತಿನಲ್ಲಿ ಅವರವರ ಭಾಷೆಯಲ್ಲಿಯೇ ಸೇವೆಗಳು ಮತ್ತು ಮಾಹಿತಿಗಳು ಲಭಿಸುತ್ತಿರುವ ಸಂದರ್ಭದಲ್ಲಿ ಈ ವಾಹಿನಿಗಳು ಕನ್ನಡದಲ್ಲಿ ಸೇವೆ ಒದಗಿಸ ಬಹುದಾಗಿದೆ. 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಹಾಗೂ ಆರು ಕೋಟಿಗೂ ಅಧಿಕ ಜನ ಮಾತಾನಾಡುವ, ಬಳಸುವ ಕನ್ನಡ ಭಾಷೆಯಲ್ಲಿ ವಾಹಿನಿಗಳು ಪ್ರಸಾರ ಮಾಡಿ ಕನ್ನಡಿಗರಿಗೆ ಭೂ ಜಗತ್ತಿನ ವಿಸ್ಮಯಗಳನ್ನು ತಮ್ಮ ಭಾಷೆಯಲ್ಲಿ ತಿಳಿದುಕೊಳ್ಳುವ ಅವಕಾಶ ಒದಗಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ

ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
