ಕೋಮುವಾದಿ ಬಿಜೆಪಿ ಸೋಲಿಸಲು ಜೆಡಿಎಸ್ ಕೈ ಜೋಡಿಸಲಿ: ಸಿದ್ದರಾಮಯ್ಯ
Team Udayavani, Jun 8, 2022, 12:22 PM IST
ಧಾರವಾಡ: ‘ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಲು ಜೆಡಿಎಸ್ ಪಕ್ಷವೇ ಕಾಂಗ್ರೆಸ್ ಬೆನ್ನಿಗೆ ನಿಲ್ಲಬೇಕಾದ ಅಗತ್ಯವಿದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಪರ ಪ್ರಚಾರಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಿದ್ದಾಗ ಕಾಂಗ್ರೆಸ್ ಅವರನ್ನು ಬೆಂಬಲಿಸಿತ್ತು. ನಾವೀಗ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಕುಮಾರಸ್ವಾಮಿ ಅವರಿಗೆ ನಿಜವಾಗಲೂ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವ ಮನಸ್ಸಿದ್ದರೆ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿ’ ಎಂದರು.
ಇದನ್ನೂ ಓದಿ:ಮೇಕದಾಟು ಯೋಜನೆ ತಡೆಗೆ ಸುಪ್ರೀಂಗೆ ತ.ನಾಡು ಅರ್ಜಿ: ಇದು ನ್ಯಾಯ ಸಮ್ಮತವಲ್ಲ; ಸಿಎಂ ಬೊಮ್ಮಾಯಿ
‘ಕೆಡಿಸುವ ಆಟ ಅಡುತ್ತಿರುವುದು ಜೆಡಿಎಸ್. ಕಾಂಗ್ರೆಸ್ ಅಧಿಕ ಸಂಖ್ಯೆಯಲ್ಲಿದ್ದಾಗಲೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಹೀಗಿರುವಾಗ ಕುಮಾರಸ್ವಾಮಿ ಅವರು ಕಾಂಗ್ರೆಸ್ ಕಡೆ ಬೆರಳು ತೋರಿಸುವುದು ಸರಿಯಲ್ಲ’ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳೀದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ