ವಿಶ್ವನಾಥ್ ಪರಿಸ್ಥಿತಿ ಅರ್ಥಮಾಡಿಕೊಳ್ಳಲಿ
Team Udayavani, Feb 3, 2020, 3:04 AM IST
ಹೊಸಪೇಟೆ: ಎಚ್.ವಿಶ್ವನಾಥ ಅವರು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಅವರಿಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕಿದೆ. ಸೋತವರಿಗೆ ಸಚಿವ ಸ್ಥಾನ ನೀಡಬೇಕೋ, ಬೇಡ್ವೋ ಅನ್ನೋ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕೋರ್ಟ್ ಆದೇಶದಲ್ಲಿ ಸೋತವರಿಗೆ ಮಂತ್ರಿ ಸ್ಥಾನ ನೀಡೋ ಬಗ್ಗೆ ಸ್ಪಷ್ಟನೆ ಇಲ್ಲ.
ಯಾರನ್ನು ಕೈಬಿಡೋ ಪ್ರಶ್ನೆ ಇಲ್ಲ. ವಿಶ್ವನಾಥ್ ಹಿರಿಯ ರಾಗಿದ್ದು, ಪರಿಸ್ಥಿತಿ ಅರ್ಥ ಮಾಡಿಕೊಳ್ಳ ಬೇಕು ಎಂದರು. ಆರ್.ಶಂಕರ್ ಅವರಿಗೆ ಅನ್ಯಾಯವಾಗಲ್ಲ. ಸವದಿ ಕೂಡ ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ. ಉಪ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.
ಫೆ. 20ರೊಳಗೆ ಲಕ್ಷ್ಮಣ ಸವದಿ ಅವರ ವಿಷಯದಲ್ಲಿ ನಿರ್ಧಾರ ಕೈಗೊಳ್ಳಬೇಕಿದ್ದು, ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ಗೆ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಇರೋದೊಂದೆ ಸ್ಥಾನ ಯಾರಿಗೆ ಕೊಡಬೇಕು. ಅನಿವಾರ್ಯವಾಗಿ ಸವದಿಗೆ ನೀಡಲಾಗಿದೆ. ಮುಂದೆ ಶಂಕರ್ ಅವರಿಗೂ ಒಳ್ಳೆಯದಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ