“ಗ್ರಾಮವಾಸ್ತವ್ಯ ಒಮ್ಮೆ ತಿರುಗಿ ನೋಡಲಿ’

Team Udayavani, Jun 4, 2019, 3:06 AM IST

ಉಡುಪಿ: “ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಹಿಂದೆ ವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಈಗ ಹೇಗಿದೆ ಎಂಬುದನ್ನು ತಿರುಗಿ ನೋಡಲಿ’ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಮೊದಲು ಹೊಟೇಲ್‌ ಕೊಠಡಿ ವಾಸ್ತವ್ಯ ಬಿಟ್ಟು ವಿಧಾನಸೌಧದ ತಮ್ಮ ಕಚೇರಿಯಲ್ಲಿದ್ದು ಕೆಲಸ ಮಾಡಲಿ ಎಂದರು.

ಸಿದ್ದರಾಮಯ್ಯ ಆಟ: ಬಿಜೆಪಿ ಆಪರೇಷನ್‌ ಕಮಲ ಮಾಡುತ್ತಿಲ್ಲ. ಸಿದ್ದರಾಮಯ್ಯ ತಾವೇ ಮುಖ್ಯಮಂತ್ರಿಯಾಗಬೇಕೆಂದು ಶಾಸಕರನ್ನು ಎತ್ತಿಕಟ್ಟಿ ಗೊಂದಲ ಸೃಷ್ಟಿಸಿ ಆಟ ಆಡುತ್ತಿದ್ದಾರೆ. ಒಂದು ವೇಳೆ ಸರಕಾರಕ್ಕೆ ನೈತಿಕತೆ ಇದ್ದಿದ್ದರೆ ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಕೂಡಲೇ ರಾಜೀನಾಮೆ ನೀಡಬೇಕಿತ್ತು. ಒಟ್ಟಾರೆ ಸ್ವಾರ್ಥ ರಾಜಕೀಯದಿಂದ ಜನತೆ ತೊಂದರೆಗೀಡಾಗಿದ್ದಾರೆ ಎಂದರು.

ಸರಕಾರ ಕನ್ನಡಕ್ಕೆ ಆದ್ಯತೆ ನೀಡಲಿ: ತ್ರಿಭಾಷಾ ಶಿಕ್ಷಣದ ಕುರಿತು ಪ್ರಶ್ನಿಸಿದಾಗ ರಾಜ್ಯ ಸರಕಾರ ಮೊದಲು ಕನ್ನಡ ಭಾಷೆಯ ಅಭಿವೃದ್ಧಿಗೆ ಬೇಕಾದ ಬೆಂಬಲ ನೀಡಲಿ. ಕನ್ನಡ ಮಾತನಾಡುವುದನ್ನು ಕಡ್ಡಾಯ ಮಾಡಲಿ. ಕನ್ನಡ ಶಾಲೆಗಳಿಗೆ ಉತ್ತಮ ಶಿಕ್ಷಕರು ಸೇರಿ ಅಗತ್ಯ ಸೌಕರ್ಯ ನೀಡಿ ಗುಣಮಟ್ಟದ ಶಿಕ್ಷಣಕ್ಕೆ ಒದಗಿಸಲಿ. ಅನ್ಯ ಭಾಷೆಗಳನ್ನೂ ಕಲಿಯಬೇಕು.

ತ್ರಿಭಾಷಾ ಶಿಕ್ಷಣದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕನ್ನಡದ ಕೆಲಸಗಳಿಗೆ ಮೀಸಲಿಟ್ಟ ಹಣವನ್ನು ಅಮೆರಿಕಕ್ಕೆ ಪ್ರವಾಸ ಹೋಗಲು ವೆಚ್ಚ ಮಾಡಿದ್ದರು ಎಂದು ಶೋಭಾ ತಿಳಿಸಿದರು.

ಸುಮಲತಾ ಬೆಂಬಲ ಅಪೇಕ್ಷೆ: ಸುಮಲತಾ ಬೆಂಬಲ ಪಡೆಯಲು ಕಾಂಗ್ರೆಸ್‌ ಯತ್ನಿಸುತ್ತಿದೆ ಎಂಬ ಪತ್ರಕರ್ತರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿದೆ. ಹಾಗಾಗಿ ಈಗ ಅವರ ಬೆಂಬಲ ಬಿಜೆಪಿಗೆ ಇರುತ್ತದೆ ಎಂಬುದು ನಮ್ಮ ಅಪೇಕ್ಷೆ ಎಂದರು.

ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದು ಜನರು ಗುಳೆ ಹೊರಟಿದ್ದಾರೆ. ಜಾನುವಾರುಗಳು ಮೇವಿಲ್ಲದೆ ಅಸು ನೀಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯವು ಪಲಾಯನ ಸೂತ್ರದಂತೆ ಕಾಣುತ್ತಿದ್ದು, ಹಾಸ್ಯಾಸ್ಪದವೆನಿಸಿದೆ.
-ಕೋಟಾ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ

ಕುಮಾರಸ್ವಾಮಿ ನುಡಿದಂತೆ ನಡೆಯಲ್ಲ. ಹಿಂದೆ ಹುಬ್ಬಳ್ಳಿಯಲ್ಲಿ ಮನೆ ಮಾಡಿ ಉತ್ತರ ಕರ್ನಾಟಕದಲ್ಲೇ ಇರುತ್ತೇನೆ ಎಂದಿದ್ದರು. ಅದರಂತೆ ನಡೆದುಕೊಳ್ಳಲಿಲ್ಲ. ಈಗ ಪುನಃ ಗ್ರಾಮ ವಾಸ್ತವ್ಯ ಮಾಡುವುದಾಗಿ ಹೇಳುತ್ತಿದ್ದಾರೆ. ಹಿಂದೆ ವಾಸ್ತವ್ಯ ಮಾಡಿದ್ದ ಮನೆಗಳನ್ನು ತಿರುಗಿಯೂ ನೋಡಿಲ್ಲ. ಅವರ ಗ್ರಾಮ ವಾಸ್ತವ್ಯದಿಂದ ಯಾರಿಗೆ ಲಾಭವಾಗಿದೆ?
-ಮುರಗೇಶ ನಿರಾಣಿ, ಶಾಸಕ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ