ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ

ಸ್ವತಃ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ;ಅಗಲಿದವರ ನೆನೆದು ಕಣ್ಣೀರಾದ ಕುಟುಂಬ ಸದಸ್ಯರು

Team Udayavani, Mar 2, 2024, 12:40 AM IST

ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ

ಬೆಂಗಳೂರು: ಅದೊಂದು ಅಪರೂಪದ ವೇದಿಕೆ. ಅಲ್ಲಿ ತಮ್ಮವರ ಅಗಲಿಕೆಯ ನೋವಿನಲ್ಲೂ ಮತ್ತೂಬ್ಬರ ಜೀವಗಳಿಗೆ ಮಿಡಿದವರು ಸೇರಿದ್ದರು. ಹೀಗೆ ನೂರಾರು ಜೀವಗಳನ್ನು ರಕ್ಷಿಸಿದ ಸಾರ್ಥಕಭಾವ ಆ ಮುಖಗಳಲ್ಲಿ ಕಾಣುತ್ತಿತ್ತು. ಅವರಿಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳುವುದರ ಜತೆಗೆ ಅವರ ಕಾರ್ಯಕ್ಕೆ ಪ್ರಶಂಸಾ ಪತ್ರವನ್ನೂ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಪಘಾತದಲ್ಲಿ ಸಾವನ್ನಪ್ಪಿದ ಪತಿಯ ಅಂಗಾಂಗಳನ್ನು ದಾನ ಮಾಡಿದ್ದ ಪತ್ನಿ, ಕೊಲೆಗೀಡಾದ ವ್ಯಕ್ತಿಯ ಅಂಗಾಂಗಳನ್ನು ಬೇರೆಯವರಿಗೆ ನೀಡಿ ಮಾನವೀಯತೆ ಮೆರೆದ ಕುಟುಂಬದ ಸದಸ್ಯರು ಹೀಗೆ ಹತ್ತಾರು ಕುಟುಂಬಗಳು ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಕುಟುಂಬದ ಸದಸ್ಯರನ್ನು ನೆನೆದು ಕಣ್ಣೀರಾದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀವು ಕೈಗೊಂಡ ನಿರ್ಧಾರ ಸುಲಭವಲ್ಲ. ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ. ನೀವು ಮತ್ತೂಬ್ಬರ ಜೀವಗಳಿಗೆ ಮಿಡಿದಿದ್ದೀರಿ. ಮುಂದಿನ ದಿನಗಳಲ್ಲಿ ನಿಮಗೆ ಯಾವುದೇ ರೀತಿಯ ಸಂಕಷ್ಟ ಎದುರಾದರೂ ಸರಕಾರ ನಿಮ್ಮ ಕಷ್ಟಗಳಿಗೆ ಮಿಡಿಯಲಿದೆ. ನಿಮ್ಮೊಂದಿಗೆ ನಾವು ಸದಾ ಇರುತ್ತೇವೆ ಎಂದು ಸ್ಥೈರ್ಯ ತುಂಬಿದರು.ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿ, ಇನ್ನಷ್ಟು ಜನ ಅಂಗಾಂಗ ದಾನಕ್ಕೆ ಮುಂದಾಗಬೇಕು. ಅಲ್ಲದೆ, ಈ ಬಗ್ಗೆ ಜಾಗೃತಿ ಅಭಿಯಾನಗಳು ಮತ್ತಷ್ಟು ಪರಿಣಾಮಕಾರಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಅಂಗಾಂಗ ದಾನ ಕೋರಿ, ನೋಂದಾಯಿಸಿಕೊಂಡವರ ಸಂಖ್ಯೆ 8 ಸಾವಿರಕ್ಕೂ ಹೆಚ್ಚಿದ್ದು, ಕಳೆದ ಒಂದು ವರ್ಷದಲ್ಲಿ ಕೇವಲ 178 ಅಂಗಾಂಗ ದಾನ ನಡೆದಿದೆ. ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕಳೆದೆರಡು ತಿಂಗಳಲ್ಲೇ 21 ಜನ ಅಂಗಾಂಗ ದಾನ ನಡೆದಿದೆ. ಆದರೆ ಇದು ಇನ್ನಷ್ಟು ಹೆಚ್ಚಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು, ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌, ಆಯುಕ್ತ ಡಿ.ರಂದೀಪ್‌ ಉಪಸ್ಥಿತರಿದ್ದರು.

ಅಂಗಾಂಗ ದಾನಕ್ಕಾಗಿ ಪ್ರತಿಜ್ಞೆಗಳ ನೋಂದಣಿ ಅತ್ಯಂತ ಸುಲಭ. ವೆಬ್‌ಸೈಟ್‌: http://www.jeevasarthakate.karnataka.gov.in ಕ್ಲಿಕ್‌ ಮಾಡುತ್ತಿದ್ದಂತೆ ಪ್ರತಿಜ್ಞಾ ಕ್ಯುಆರ್‌ ಕೋಡ್‌ ಬರುತ್ತದೆ. ಸ್ಕ್ಯಾನ್‌ ಮಾಡಿ ಪ್ರತಿಜ್ಞೆ ಕೈಗೊಳ್ಳಬಹುದು. ಮಾಹಿತಿಗೆ ಮೊ: 98450 06768 ಸಂಪರ್ಕಿಸಬಹುದು.

178 – ಕಳೆದ ಒಂದು ವರ್ಷದಲ್ಲಾದ ಅಂಗಾಂಗಗಳ ದಾನ
21 – ಕಳೆದೆರಡು ತಿಂಗಳಲ್ಲಾದ ಅಂಗಾಂಗಗಳ ದಾನ
2- ಅಂಗಾಂಗ ದಾನದಲ್ಲಿ ದೇಶದಲ್ಲಿ ಕರ್ನಾಟಕಕ್ಕಿರುವ ಸ್ಥಾನ
717- ಕಳೆದ ಒಂದು ದಶಕದ ಅಂಗಾಂಗ ದಾನಿಗಳ ಸಂಖ್ಯೆ
8,374 – ಅಂಗಾಂಗಕ್ಕಾಗಿ ಕಾಯುತ್ತಿರುವವರ ಸಂಖ್ಯೆ
5,942 – ಮೂತ್ರಪಿಂಡಗಳಿಗಾಗಿಯೇ ಕಾಯುತ್ತಿರುವವರ ಸಂಖ್ಯೆ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.