ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ
Team Udayavani, Nov 28, 2020, 9:28 PM IST
ಗಂಗಾವತಿ: ರಾಜ್ಯದ ವೀರಶೈವ ಲಿಂಗಾಯತ ಜನಾಂಗದವರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 35 ವರ್ಷಗಳಿಂದ ಅಖಿಲ ಭಾರತ ವೀರಶೈವ ಮಹಾಸಭಾದವರು ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಮುಂದಾಗಿದ್ದರು. ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆದು ಕುಲಶಾಸ್ತ್ರೀಯ ಅಧ್ಯಯನ,ಕಾನೂನು ಪಂಡಿತರ ಅಭಿಪ್ರಾಯ ಹಾಗೂ ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿರುವ ತೀರ್ಪುಗಳನ್ನು ಗಮನಕ್ಕೆ ತೆಗೆದುಕೊಂಡ ನಂತರ ಕೇಂದ್ರ ಸರಕಾರಕ್ಕೆ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರಕಾರ ಶಿಫಾರಸ್ಸು ಮಾಡಲಾಗುತ್ತದೆ.
ಶೀಘ್ರದಲ್ಲೇ 16000 ಪೊಲೀಸ್ ಹುದ್ದೆಗಳ ಭರ್ತಿ ಮಾಡಲಾಗುತ್ತದೆ. ಪ್ರತಿ ತಾಲೂಕು ಕೇಂದ್ರದಲ್ಲಿ ಮಹಿಳಾ ಪೊಲೀಸ್ ಆರಂಭದ ಬೇಡಿಕೆ ಬರುತ್ತಿದ್ದು ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ,ಶಾಸಕ ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಯುವಮುಖಂಡ ಸಾಗರ ಮುನವಳ್ಳಿ ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಪತಿ ಪೊಲೀಸ್ ಪದಕ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ