“ಕೆಜಿಎಫ್-2′ ಚಿತ್ರೀಕರಣಕ್ಕೆ ಸ್ಥಳೀಯ ಕೋರ್ಟ್‌ನಿಂದ ತಡೆ

Team Udayavani, Aug 28, 2019, 3:05 AM IST

kgf

ಕೆಜಿಎಫ್: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ “ಕೆಜಿಎಫ್-2′ ಚಿತ್ರದ ಚಿತ್ರೀಕರಣಕ್ಕೆ ಸ್ಥಳೀಯ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ನಗರದ ಕೆನಡೀಸ್‌ ಲೈನಿನ ಬಳಿ ಇರುವ ಸೈನೈಡ್‌ ಗುಡ್ಡದ ಮೇಲೆ ತಿಂಗಳಿಂದ ಕೆಜಿಎಫ್-2 ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ನಟ ಯಶ್‌ ಮತ್ತು ಸಹನಟರು ಭಾಗವಹಿಸುತ್ತಿದ್ದ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗುತ್ತಿತ್ತು.

ಈ ಸಂದರ್ಭದಲ್ಲಿ ನಗರದ ನಿವಾಸಿ ಶ್ರೀನಿವಾಸ್‌, ಪರಿಸರಕ್ಕೆ ಹಾನಿ ಆಗುತ್ತಿದೆ ಎಂಬ ಆರೋಪ ಮಾಡಿ ಚಿತ್ರೀಕರಣಕ್ಕೆ ತಡೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ 2ನೇ ಅಡಿಷನಲ್‌ ಸಿವಿಲ್‌ ಜೆಎಂಎಫ್ ನ್ಯಾಯಾಲಯ ಸೆ.23ರವರೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಎರಡನೇ ಹಂತದ ಚಿತ್ರೀಕರಣ: ಕೆಜಿಎಫ್ ಫ‌ಸ್ಟ್‌ ಚಿತ್ರದ ಚಿತ್ರೀಕರಣ ಕೂಡ ನಗರದ ಸೈನೈಡ್‌ ಗುಡ್ಡದ ಮೇಲೆಯೇ ನಡೆದಿತ್ತು. ಮೂರು ತಿಂಗಳ ಕಾಲ ದುಬಾರಿ ವೆಚ್ಚದಲ್ಲಿ ಬಿಜಿಎಂಎಲ್‌ ಕಾಲೋನಿಗಳು ಮತ್ತು ಶಾಫ್ಟ್ ಸೆಟ್‌ನ್ನು ಹಾಕಲಾಗಿತ್ತು. ಶೂಟಿಂಗ್‌ ಮುಗಿದ ಮೇಲೆ ಎಲ್ಲವನ್ನೂ ನಾಶಪಡಿಸಲಾಗಿತ್ತು. ಮೊದಲ ಚಾಪ್ಟರ್‌ ಯಶಸ್ಸು ಸಾಧಿಸಿದ ನಂತರ ಎರಡನೇ ಚಾಪ್ಟರ್‌ ತೆಗೆಯುವಾಗ ಪುನಃ ಅದೇ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಪುನಃ ಇಡೀ ಕಾಲೋನಿಯ ಮತ್ತು ಶಾಫ್ಟ್ ಸೆಟ್‌ನ್ನು ಹಾಕಲಾಗಿದೆ. ಚಿತ್ರೀಕರಣದ ದೃಶ್ಯ ಮತ್ತು ಮಾಹಿತಿ ಹೊರಗೆ ಹೋಗಬಾರದು ಎಂಬ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನೂ ಹಾಕಲಾಗಿದೆ. ಚಿತ್ರೀಕರಣ ನೋಡಲು ಬರುವವರನ್ನೂ ನಿರ್ಬಂಧಿಸಲಾಗಿದೆ. ಈಚೆಗೆ ಚಿತ್ರೀಕರಣ ನೋಡಲು ಬಂದ ಗೋಣಮಾಕನಹಳ್ಳಿಯ ವ್ಯಕ್ತಿಗೂ ಮತ್ತು ಸಿನಿಮಾ ತಂಡದವರಿಗೆ ಘರ್ಷಣೆಯಾಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.