ಸ್ಥಳೀಯ ಸಂಸ್ಥೆ ಚುನಾವಣೆ: ಸಂಪುಟದಲ್ಲಿ ಚರ್ಚೆ ಸಾಧ್ಯತೆ
Team Udayavani, May 12, 2022, 7:15 AM IST
ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಬೇತೇ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕೇ ಎನ್ನುವ ಕುರಿತು ರಾಜ್ಯ ಸರಕಾರ ಗೊಂದಲಕ್ಕೆ ಸಿಲುಕಿದ್ದು, ಈ ಕುರಿತು ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ ನೀಡುವ ಕುರಿತು ಅಧ್ಯಯನ ನಡೆಸಲು ಆಯೋಗ ರಚನೆ ಮಾಡಿದೆ. ಅಲ್ಲದೆ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಗಡಿ ನಿರ್ಧರಿಸಲು ಸೀಮಾ ನಿರ್ಣಯ ಆಯೋಗ ರಚನೆ ಮಾಡಿದೆ.
ಅವೆರಡೂ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿಯೇ ಸುಪ್ರೀಂ ಕೊರ್ಟ್ ದೇಶದ ಎಲ್ಲ ರಾಜ್ಯಗಳಿಗೂ ಅನ್ವಯಿಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಿದ್ದು, ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.