ಸಂಪೂರ್ಣ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಿ: ದೇವೇಗೌಡ ಆಗ್ರಹ
Team Udayavani, Jul 13, 2020, 10:06 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಮಿತಿಮೀರುತ್ತಿದ್ದು, ಇದನ್ನು ತಡೆಯಲು ಸರ್ಕಾರ ಬೆಂಗಳೂರಿನಲ್ಲಿ ಒಂದು ವಾರದ ಲಾಕ್ ಡೌನ್ ವಿಧಿಸಿದ್ದು ಉತ್ತಮ ನಡೆ. ಆದರೆ ಇಡೀ ರಾಜ್ಯದಲ್ಲಿ ಲಾಕ್ ಡೌನ್ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಆಗ್ರಹಿಸಿದ್ದಾರೆ.
ನಮಗೆ ಆರೋಗ್ಯವೇ ಭಾಗ್ಯ. ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ದಯವಿಟ್ಟು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಏನೇ ಮುಟ್ಟಬೇಕಾದರು ಸ್ಯಾನಿಟೈಸರ್ ನಿಂದ ಕೈಯನ್ನು ಸ್ವಚ್ಛ ಗೊಳಿಸಿ ನಂತರ ಮುಟ್ಟಿ. ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ ಎಂದು ಮಾಜಿ ಪ್ರಧಾನಿಗಳು ಜನತೆಯಲ್ಲಿ ಮನವಿ ಮಾಡಿದ್ದಾರೆ.
ಕೋವಿಡ್-19 ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜುಗಳನ್ನು ಘೋಷಿಸಿದೆ. ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕ ನಾಯಕರುಗಳು ಆಪಾದಿಸುತ್ತಿದ್ದಾರೆ. ಅದೇನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆಮಾಡಲಿ. ಈಗ ನಮಗೆ ಜನತೆಯ ಆರೋಗ್ಯ ಮುಖ್ಯ. ಮೊದಲು ನಾವೆಲ್ಲ ಅದರ ಕಡೆ ಗಮನ ಹರಿಸೋಣ ಸರ್ಕಾರವು ಸಹ ಇದರ ನಿಟ್ಟಿನಲ್ಲಿ ಕೆಲಸ ಮಾಡಬೇಕು. ನಾವೆಲ್ಲ ಜೊತೆಗಿದ್ದೀವಿ ಜನತೆಯ ಆರೋಗ್ಯದ ಜೊತೆ ಚೆಲ್ಲಾಟ ಬೇಡ. ಇನ್ನು ಮುಂದಾದರು ಎಚ್ಚೆತ್ತು ಕೆಲಸ ಮಾಡಿ ಎಂದು ಎಚ್ ಡಿಡಿ ಮನವಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!