Lokayukta raid: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ


Team Udayavani, Aug 17, 2023, 10:56 AM IST

Lokayukta raid: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ  ಆಸ್ತಿ ಸಂಪಾದನೆಯ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ (ಆ.16 ರಂದು) ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಮನಗರ, ಮಡಿಕೇರಿ,ದಾವಣಗೆರೆ, ಬೀದರ್‌ ಸೇರಿದಂತೆ 50 ಕ್ಕೂ ಹೆಚ್ಚಿನ ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.

ರಾಮನಗರ: ಬೆಳ್ಳಂಬೆಳಗ್ಗೆ BBMP ಅಧಿಕಾರಿ ಮನೆ ಮೇಲೆ‌ ಲೋಕಾಯುಕ್ತ ದಾಳಿ, ಅಧಿಕಾರಿ ನಾಪತ್ತೆ

ರಾಮನಗರ:ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕನಕಪುರದಲ್ಲಿರುವ ಬಿಬಿಎಂಪಿ ಅಧಿಕಾರಿ ನಟರಾಜ್ ಅವರ ಮನೆ ಹಾಗೂ ಫಾರಂ ಹೌಸ್‌ಗೆ ದಾಳಿ ನಡೆಸಿದ್ದಾರೆ.

ಅಪಾರ ಪ್ರಮಾಣದ ಅಕ್ರಮ‌ಆಸ್ತಿ ಸಂಪಾದನೆ ಆರೋಪ‌‌ ಹಿನ್ನೆಲೆ‌ಯಲ್ಲಿ ರಾಮನಗರ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ಮನೆ ಜೊತೆಗೆ ಫಾರಂ ಹೌಸ್ ಮೇಲೂ ದಾಳಿ ಮಾಡಿದ್ದಾರೆ.

ನಟರಾಜ್ ಅವರು ಕನಕಪುರದ ಶಿವನಹಳ್ಳಿ ಗ್ರಾಮದಲ್ಲಿ ಭವ್ಯ ಬಂಗಲೆ ಹೊಂದಿದ್ದು ಗ್ರಾಮದಲ್ಲೇ 7.5 ಎಕರೆ ತೆಂಗಿನತೋಟ, ಅಡಿಕೆ ತೋಟ ಹೊಂದಿದ್ದಾರೆ ಎನ್ನಲಾಗಿದೆ ದಾಳಿ ನಟರಾಜ್ ನಾಪತ್ತೆಯಾಗಿದ್ದು ಕೆಲಸಕ್ಕಿದ್ದ ಕಾರ್ಮಿಕರಿಂದ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೆ ಮನೆಯಲ್ಲಿದ್ದ ದಾಖಲೆ ಪತ್ರಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.

ಮಡಿಕೇರಿ: ಕೊಡಗು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿ:

ಮಡಿಕೇರಿ: ಕೊಡಗು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಮುಂಜಾನೆ 4 ಗಂಟೆಗೆ ಡಾ.ನಂಜುಂಡೇಗೌಡ ಅವರ ಮಡಿಕೇರಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿಗಳು ಪರಿಶೀಲನೆ ಕೈಗೊಂಡಿದ್ದಾರೆ.

ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದ್ದು  ಮಡಿಕೇರಿ ಮನೆಯಲ್ಲಿ ನಗದು ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ.

ಬೀದರ್: ಆದಾಯಕ್ಕಿಂದ ಹೆಚ್ಚಿನ ಆಸ್ತಿ: ಕಾನ್‌ಸ್ಟೇಬಲ್‌ ಮನೆಗೆ ಲೋಕಾಯುಕ್ತ ರೇಡ್:

ಹುಮನಾಬಾದ: ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್‌ ಸ್ಟೇಬಲ್‌ ಒಬ್ಬರು ಆದಾಯಕ್ಕಿಂತ ಹೆಚ್ಚು ಅಸ್ತಿ ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಆಧಿಕಾರಿಗಳು ಗುರುವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.

ವಿಜಯಕುಮಾರ ಎಂಬುವರ ಹುಮನಾಬಾದ ಪಟ್ಟಣದ ಟೀಚರ್ಸ್ ಬಡಾವಣೆ ಮನೆ ಹಾಗೂ ಬೀದರ್ ತಾಲೂಕಿನ  ಹೊಚ್ಚಕನಳ್ಳಿ ಗ್ರಾಮದಲ್ಲಿನ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ‌

ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಕುರಿತು ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದಾರೆ. ಲೋಕಾಯುಕ್ತ ಡಿವೈಎಸ್ಪಿ ಓಲೇಕರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

ದಾವಣಗೆರೆ: ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್, ಬಿಬಿಎಂಪಿ ಎಇಇ ನಿವಾಸದ ಮೇಲೆ ದಾಳಿ:

ದಾವಣಗೆರೆ: ಚಿತ್ರದುರ್ಗ ತಾಲೂಕಿನ ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಬಿಬಿಎಂಪಿ ಎಇಇ ಎಚ್.ಭಾರತಿ ಅವರ ದಾವಣಗೆರೆಯಲ್ಲಿನ ಜಯನಗರದಲ್ಲಿರುವ ನಿವಾಸದ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಎಚ್. ಮಹೇಶ್ ದಾವಣಗೆರೆಯ ಜಯನಗರದಲ್ಲಿ ವಾಸವಾಗಿದ್ದಾರೆ. ಅವರ ಪತ್ನಿ ಎಚ್. ಭಾರತಿ ದಾವಣಗೆರೆ ಮಹಾನಗರ ಪಾಲಿಕೆಯ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಪ್ರಸ್ತುತ ಬಿಬಿಎಂಪಿ ಎಇಇ ಆಗಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಲೋಕಾಯುಕ್ತ ದಾಳಿ, ಪರಿಶೀಲನೆ  ನಡೆಸಿದ ಸಂದರ್ಭದಲ್ಲಿ ಈವರೆಗೆ 1ಕೆಜಿಗೂ ಅಧಿಕ ಚಿನ್ನಾಭರಣ, 15ಲಕ್ಷ  ನಗದು ಪತ್ತೆಯಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.