30% ಕಮಿಷನ್‌ ಕಥೆ ಬಿಚ್ಚಿಟ್ಟ ಮಾಧುಸ್ವಾಮಿ

Team Udayavani, Jul 4, 2018, 11:49 AM IST

30commission.jpg

ಬೆಂಗಳೂರು: ಹಿಂದಿನ ಸರ್ಕಾರದಲ್ಲಿ ಶೇ.20 ರಿಂದ 30ರಷ್ಟು  ಕಮಿಷನ್‌ಗಾಗಿ ಪ್ಯಾಕೇಜ್‌ ಗುತ್ತಿಗೆ ನೀಡಿ ಎಲ್ಲ ವ್ಯವಸ್ಥೆಯನ್ನು ಔಟ್‌ಸೋರ್ಸ್‌ ಮಾಡಿದೆ. ವಿಧಾನಸೌಧವನ್ನೂ ಔಟ್‌ಸೋರ್ಸ್‌ ಮಾಡಿದರೆ ನಾವೂ ಅವರ ಕೆಳಗೆ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಸದಸ್ಯ ಮಾಧುಸ್ವಾಮಿ ಗಂಭೀರ ಆರೋಪ ಮಾಡಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಭರವಸೆಯಿಲ್ಲ.

ಅನಿವಾರ್ಯವಾಗಿ ಪೋಸ್ಟ್‌ಮಾರ್ಟ್‌ಂ ಮಾಡಬೇಕಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡು ಈಗ ಸಾಂದರ್ಭಿಕ ಶಿಶು ಎಂದು ಆನಾರೋಗ್ಯದ ಕಾರಣ ಹೇಳಿದ್ದಾರೆ. ನಾವಿಕನೇ ಆನಾರೋಗ್ಯ ಎಂದರೆ ನಾವೆಲ್ಲ ಎಲ್ಲಿ ಹೋಗುವುದು ಎಂದರು.  ಕಾಂಗ್ರೆಸ್‌ ಅವಧಿಯಲ್ಲಿ ಜಾರಿಗೆ ಬಂದಿದ್ದ ಎಸಿಬಿ ಮುಚ್ಚಿಸುವುದು, ಕಲಬೆರೆಕೆ ಎಣ್ಣೆ ನಿಯಂತ್ರಣ ಮಾಡುವುದು.

ರಾಜಕೀಯ ಪ್ರೇರಿತ ಕೊಲೆಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಆದರೆ, ಈಗ ಅವರೊಂದಿಗೆ ಸರ್ಕಾರ ರಚನೆ ಮಾಡಿದ್ದಾರೆ ಎಂದರು.  ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಿ.ಟಿ. ರವಿ ಸರ್ಕಾರವೇ ಕಲಬೆರಕೆಯಾಗಿದೆ ಎಂದಾಗ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಹಿಂದೆ ನೀವು ಜೆಡಿಎಸ್‌ ಜತೆ ಕೈ ಜೋಡಿಸಿದಾಗ ಕಲಬೆರಕೆಯಾಗಿರಲಿಲ್ಲವೇ ಎಂದು ಪ್ರಶ್ನಿಸಿದರು.  

ಮತ್ತೆ ಮಾತು ಮುಂದುವರಿಸಿದ ಮಾಧುಸ್ವಾಮಿ, ಶಾಸಕರಿಗೆ ಗೊತ್ತಿಲ್ಲದೆಯೇ ಬೆಂಗಳೂರಿನಲ್ಲಿಯೇ ಎಲ್ಲ ಯೋಜನೆಗಳನ್ನು ಟೆಂಡರ್‌ ಕರೆಯದೆ ಕ್ರೆಡೆಲ್‌, ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗುತ್ತಿದೆ. ಇದರ ಹಿಂದಿನ ಉದ್ದೇಶವೇನು? ಎಪಿಎಂಸಿಗಳನ್ನು ಆನ್‌ಲೈನ್‌ ಮಾಡಿದ್ದೇವೆಂದು ಹೇಳಿದ್ದಾರೆ. ಅದನ್ನು ಔಟ್‌ಸೋರ್ಸ್‌ ಮಾಡಿ ರೈತರಿಗೆ ಯಾವುದೇ ಅನುಕೂಲವಾಗದಂತಾಗಿದೆ.

ಕೇವಲ ಮೂರು ನಾಲ್ಕು ಕಂಟ್ರಾಕ್ಟರ್‌ಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಆರೋಪಿಸಿದರು. ಅಂಗನವಾಡಿಗೆ ಆಹಾರ ಸರಬರಾಜು ಯಾರಿಗೆ ಕೊಟ್ಟಿದ್ದೀರಿ ? ಸಣ್ಣ ನೀರಾವರಿ ಇಲಾಖೆಯಲ್ಲಿ ಕೆರೆ ತುಂಬಿಸಲು ಕಾಲುವೆ ನಿರ್ಮಿಸಲು ಜಮೀನು ವಶ ಪಡಿಸಿಕೊಳ್ಳದೇ ಯೋಜನೆ ಪೂರ್ಣಗೊಳಿಸಿರುವುದಾಗಿ ಬೋರ್ಡ್‌ ಹಾಕಿಕೊಂಡಿದ್ದಾರೆ.

ನೆಂಟರಿಗೆ ಸಹಾಯ ಮಾಡಲು ಯೋಜನೆಗಳ ಗುತ್ತಿಗೆ ನೀಡಿದ್ದಾರೆ.  ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಎಸ್‌ಟಿಪಿ, ಟಿಎಸ್‌ಪಿ ಯೋಜನೆ ಜಾರಿಗೆ ತಂದು ದಲಿತರ ಕೇರಿಗಳಲ್ಲಿ ಕಾಂಕ್ರೀಟ್‌ ರಸ್ತೆ ಮಾಡಲಾಗಿದೆ, ಬಿಟ್ಟರೆ ಅವರ ಆರ್ಥಿಕ ಅಭಿವೃದ್ಧಿಗೆ ಯಾವುದೇ ಯೋಜನೆ ರೂಪಿಸಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಅವರ ಆರೋಪಕ್ಕೆ ಜೆಡಿಎಸ್‌ನ ಶಿವಲಿಂಗೇಗೌಡ ಆಕ್ಷೇಪ ಎತ್ತಿ ಹಿಂದಿನ ಅವಧಿಯಲ್ಲಿದ್ದ ಎಲ್ಲ ಶಾಸಕರು ಭ್ರಷ್ಟರು ಎನ್ನುವುದು ಸರಿಯಲ್ಲ. ನಮ್ಮ ಕ್ಷೇತ್ರಗಳಿಗೆ ಬನ್ನಿ ಸಾಕಷ್ಟು ಕೆಲಸ ಮಾಡಿದ್ದೇವೆಂದು ಸವಾಲು ಹಾಕಿದರು. ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಕೂಡ ಅವರ ಬೆಂಬಲಕ್ಕೆ ನಿಂತು ಹಿಂದಿನ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಾಗಿವೆ ಎಂದು ಸಮರ್ಥಿಸಿಕೊಂಡರು. 

ಟಾಪ್ ನ್ಯೂಸ್

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ವಿದ್ಯುತ್‌ ಶಾಕ್‌ನಿಂದಲೇ ರೇಣುಕಾಸ್ವಾಮಿ ಸಾವು! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

ವಿದ್ಯುತ್‌ ಶಾಕ್‌ನಿಂದಲೇ ರೇಣುಕಾಸ್ವಾಮಿ ಸಾವು! ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ

bjpಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ

ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ

ಸರ್ಕಾರಿ ಬಸ್‌ ಪ್ರಯಾಣ ದರ ಹೆಚ್ಚಳ: ಸಾರಿಗೆ ಸಚಿವರ ಸುಳಿವು

Government ಬಸ್‌ ಪ್ರಯಾಣ ದರ ಹೆಚ್ಚಳ: ಸಾರಿಗೆ ಸಚಿವರ ಸುಳಿವು

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.