ಅಪೌಷ್ಠಿಕತೆ: ಸಮಿತಿ ಪುನಾರಚನೆ ದಾಖಲೆ ಸಲ್ಲಿಸಿ
Team Udayavani, Dec 12, 2019, 3:03 AM IST
ಬೆಂಗಳೂರು: ರಾಜ್ಯದಲ್ಲಿ ಅಪೌಷ್ಠಿಕತೆ ನಿರ್ಮೂಲನೆ ಕುರಿತು ಅಧ್ಯಯನ ನಡೆಸಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಲು 2012ರಲ್ಲಿ ರಚಿಸಲಾಗಿದ್ದ ಸಮಿತಿಯನ್ನು ಪುನಾಚರನೆ ಮಾಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತಂತೆ ಬೆಳಗಾವಿ ಜಿಲ್ಲೆ ಅಥಣಿಯ ವಿಮೋಚನಾ ಸಂಸ್ಥೆಯ ಬಿ.ಎಲ್.ಪಾಟೀಲ್ ಅವರು 2011ರಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದ ಪತ್ರ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿರಿಯ ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಆಗ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಅಪೌಷ್ಠಿಕತೆ ನಿರ್ಮೂಲನೆ ಕುರಿತು ಅಧ್ಯಯನ ನಡೆಸಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಲು 2012ರಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈಗ ಆ ಸಮಿತಿಯನ್ನು ಪುನಾರಚನೆ ಮಾಡಬೇಕಾಗಿದೆ. ಸಂಭಾವ್ಯ ಪುನಾರಚಿತ ಸಮಿತಿಯ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಆಗ, ಸಂಭಾವ್ಯ ಪುನಾರಚಿತ ಸಮಿತಿಗೆ ಸಂಬಂಧಿಸಿದ ದಾಖಲೆಗಳನ್ನು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು. ಅರ್ಜಿದಾರರ ಪರ ವಕೀಲ ವಿನೋದ ಕೊಟಬಾಗಿ ವಾದ ಮಂಡಿಸಿದರು.ಸಮಿತಿಯ ಪುನಾರಚನೆ ಕುರಿತು ಮಾಹಿತಿ ನೀಡುವಂತೆ ಹಾಗೂ ಅರ್ಜಿಯಲ್ಲಿ ಬಿಬಿಎಂಪಿಯನ್ನು ಪ್ರತಿವಾದಿಯನ್ನಾಗಿ ಸೇರಿಸುವಂತೆ ನ.27ರಂದು ಹೈಕೋರ್ಟ್ ನಿರ್ದೇಶನ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ