ಮನಗೂಳಿ, ಚೌವ್ಹಾಣ್ ಪಕ್ಷ ಬಿಡಲ್ಲ: ಎಚ್ಕೆಕೆ
Team Udayavani, Oct 3, 2019, 3:00 AM IST
ಬೆಂಗಳೂರು : ಜೆಡಿಎಸ್ ಶಾಸಕರಾದ ಎಂ.ಸಿ.ಮನ ಗೂಳಿ ಹಾಗೂ ದೇವಾನಂದ ಚೌವ್ಹಾಣ್ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಇಬ್ಬರೂ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಅವರಿಬ್ಬರೂ ನಮ್ಮ ಪಕ್ಷಕ್ಕೆ ನಿಷ್ಠರಾಗಿದ್ದಾರೆ ಎಂದು ಹೇಳಿದರು.