ಬೆಂಗಳೂರಿನಲ್ಲಿ ಮ್ಯಾನ್‌ಹೋಲ್‌ ದುರಂತ;3 ಕಾರ್ಮಿಕರು ಬಲಿ

Team Udayavani, Jan 7, 2018, 3:34 PM IST

ಬೆಂಗಳೂರು: ನಗರದಲ್ಲಿ  ಭಾನುವಾರ ಮ್ಯಾನ್‌ಹೋಲ್‌ ದುರಂತವೊಂದು ನಡೆದಿದ್ದು ಸೋಮಸಂದ್ರ ಪಾಳ್ಯದಲ್ಲಿ ಅಪಾರ್ಟ್‌ಮೆಂಟ್‌ವೊಂದರ ಒಳಚರಂಡಿ ನೀರು ಸ್ವಚ್ಛತಾ ಘಟಕ ಸ್ವತ್ಛತೆಗೆ ಇಳಿದಿದ್ದ ಮೂವರು ಕಾರ್ಮಿಕರು  ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಅಪಾರ್ಟ್‌ಮೆಂಟ್‌ ಪಕ್ಕದಲ್ಲಿರುವ ಅಪಾರ್ಟ್‌ಮೆಂಟ್‌ನ ಎಸ್‌ಟಿಪಿಗೆ ಇಳಿದ್ದಿದ್ದ ಕೂಲಿ ಕಾರ್ಮಿಕರು 10 ಅಡಿ ಆಳದಲ್ಲಿ ಸಿಲುಕಿ ಉಸಿರುಗಟ್ಟಿ ಹೊರ ಬರಲಾರದೆ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಕಾರ್ಮಿಕರು ಸಿಲುಕಿರುವುದನ್ನು ಗಮನಿಸಿ  ಕೂಡಲೇ ಅಗ್ನಿ ಶಾಮಕದಳದ ಸಿಬಂದಿಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿತ್ತು. ಸಿಬಂದಿಗಳು ಹರಸಾಹಸ ಪಟ್ಟು ಮೂವರನ್ನುಮೇಲೆಕ್ಕೆತ್ತಿದ್ದು ಅದಾಗಲೇ ಓರ್ವ ಮೃತಪಟ್ಟಿದ್ದರು. 

ಇನ್ನಿಬ್ಬರು ಉಸಿರು ಇದ್ದಿದ್ದು ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತು ಆದರೆ ಇಬ್ಬರೂ ಕೊನೆಯುಸಿರೆಳೆದಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. 

ಮೃತ ದುರ್ದೈವಿಗಳು  ತುಮಕೂರು ಮೂಲದ ಮಾದೇಗೌಡಮತ್ತು ಕೋಲಾರ ಮೂಲದ ನಾರಾಯಣ ಸ್ವಾಮಿ ಎಂದು ತಿಳಿದು ಬಂದಿದೆ. ಇನ್ನೋರ್ವನ ಗುರುತು ಇನ್ನಷ್ಟೆ ತಿಳಿದು ಬರಬೇಕಿದೆ. 

ದುರ್ಘ‌ಟನೆ ನಡೆಸ ಸ್ಥಳಕ್ಕೆ ಬೆಂಗಳೂರು ನಗರ ಉಸ್ತುವಾರಿ  ಸಚಿವ ಕೆ.ಜೆ.ಜಾರ್ಜ್‌, ಬಿಬಿಎಂಪಿ  ಮೇಯರ್‌ ಸಂಪತ್‌ ರಾಜ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಗರ್ಭಧಾರಣೆ ಎಂಬುದು ಶಿಶು ಜನನವನ್ನು ನಿರೀಕ್ಷಿಸುತ್ತಿರುವ ತಾಯಿ ಮಾತ್ರವಲ್ಲದೆ ಇಡೀ ಕುಟುಂಬವೇ ಹರ್ಷೋಲ್ಲಾಸದಲ್ಲಿ ಇರುವ ಸಮಯ. ಗರ್ಭಧಾರಣೆಯ ಒಂಬತ್ತು ತಿಂಗಳುಗಳ...

  • ಪ್ಲಾಸ್ಟಿಕ್‌ ಇಂದು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರೆ ತಪ್ಪಾಗಲಾರದು. ಕಡಿಮೆ ವೆಚ್ಚದಲ್ಲಿ ತಯಾರಿಕೆ ಹಾಗೂ ಕೈಗೆಟಕುವ ದರದಲ್ಲಿ ಈ ಪ್ಲಾಸ್ಟಿಕ್‌...

  • ಸಾಸ್ತಾನ ಸಮೀಪದ ಮೂಡಹಡು ಹಾಗೂ ಗುಂಡ್ಮಿ ಗ್ರಾಮಗಳ ಹೈನುಗಾರರ ಸಂಸ್ಥೆಯಾಗಿರುವ ಚೇಂಪಿ ಹಾಲು ಉತ್ಪಾದಕರ ಸಂಘ ಸಣ್ಣ ವ್ಯಾಪ್ತಿಯನ್ನು ಹೊಂದಿದ್ದರೂ ಕೋಟ ಹೋಬಳಿಯಲ್ಲಿ...

  • ಹೃದ್ರೋಗಗಳಿಂದ ಹಿಡಿದು ಅಧಿಕ ರಕ್ತದೊತ್ತಡ, ಇನ್ಸುಲಿನ್‌ ಅವಲಂಬಿಯಲ್ಲದ ಟೈಪ್‌ 2 ಮಧುಮೇಹ, ಸಂಧಿವಾತ, ಪಿತ್ತಕೋಶದ ಕಲ್ಲುಗಳು ಮತ್ತು ಎಂಡೊಮೆಟ್ರಿಕ್‌ ಕ್ಯಾನ್ಸರ್‌...

  • ಎಲ್ಲಿ ನಗರಗಳಿರುತ್ತವೆಯೋ ಅಲ್ಲಿ ಸ್ಲಂಗಳು ಇದ್ದೇ ಇರುತ್ತವೆ. ಸ್ಲಂ ಎಂದಾಕ್ಷಣ ಎಲ್ಲರ ಕಣ್ಣ ಮುಂದೆ ಬರುವುದೇ ಅಲ್ಲಿನ ಕೊಳಚೆ ಪ್ರದೇಶ, ಮೂಲ ಸೌಕರ್ಯಗಳ ಕೊರತೆ,...