Udayavni Special

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

ಕನ್ನಡಿಗರ ಜತೆ ವೈಯಕ್ತಿಕ ದ್ವೇಷವಿಲ್ಲ, ಜಗಳವಿಲ್ಲ ! ­ಅನ್ಯಾಯದ ವಿರುದ್ಧ ಮಾತ್ರ ನಮ್ಮ ಹೋರಾಟ 

Team Udayavani, Apr 15, 2021, 7:24 PM IST

gjjsddgdf

ಬೆಳಗಾವಿ: ಬೆಳಗಾವಿಯಲ್ಲಿ ಬದುಕುತ್ತಿರುವ ಮರಾಠಿ ಭಾಷಿಕರು ಪಾಕಿಸ್ತಾನದವರಲ್ಲ, ಲಷ್ಕರ್‌-ಎ-ತೋಯ್ಬಾ ಸಂಘಟನೆಗೆ ಸೇರಿದವರಲ್ಲ. ನಾವು ನಿಮ್ಮಂತೆಯೇ ರಾಷ್ಟ್ರೀಯತೆ ಹಾಗೂ ಹಿಂದೂತ್ವವಾದಿ ಆಗಿದ್ದೇವೆ ಎಂದು ಮಹಾರಾಷ್ಟ್ರದ ಶಿವಸೇನೆ ವಕ್ತಾರ ಸಂಜಯ ರಾವುತ್‌ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮರಾಠಿಯ ಈ ಹೋರಾಟ ಎಂದರೆ ಹಿಂದೂತ್ವದ ಹೋರಾಟ. ಛತ್ರಪತಿ ಶಿವಾಜಿ ಮಹಾರಾಜರ ಮೇಲಿನ ಅನ್ಯಾಯದ ವಿರುದ್ಧದ ಹೋರಾಟವಾಗಿದೆ. ಇದು ವೀರರಾಣಿ ಕಿತ್ತೂರು ಚನ್ನಮ್ಮನ ಹೋರಾಟ. ನಮ್ಮದು ನಿಮ್ಮೊಂದಿಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ, ಜಗಳವಿಲ್ಲ. ನಾವು ಅನ್ಯಾಯದ ವಿರುದ್ಧ ಹೋರಾಡುತ್ತಿದ್ದೇವೆ ಎಂದರು.

ಮುಖ್ಯಮಂತ್ರಿ ಉದ್ಧವ ಠಾಕ್ರೆ ನಿರ್ದೇಶನದಂತೆ ಬೆಳಗಾವಿಯ ಲೋಕಸಭೆ ಉಪಚುನಾವಣೆಯಲ್ಲಿ ಎಂಇಎಸ್‌ ಅಭ್ಯರ್ಥಿ ಶುಭಂ ಶೇಳಕೆಯನ್ನು ಬೆಂಬಲಿಸಲು ಕರ್ತವ್ಯ ಭಾವನೆಯಿಂದ ಆಗಮಿಸಿದ್ದೇನೆ. ಶಿವಸೇನೆಯ ಸಂಪೂರ್ಣ ಬೆಂಬಲ ಶೇಳಕೆಗೆ ಇದೆ. ಮಹಾರಾಷ್ಟ್ರದಲ್ಲಿರುವ ಪ್ರತಿಯೊಂದು ಪಕ್ಷದ ಪ್ರಮುಖರು, ರಾಜಕೀಯ ಮುಖಂಡರು ಶುಭಂ ಶೇಳಕೆಯನ್ನು ಬೆಂಬಲಿಸಬೇಕು. ಸಾಧ್ಯವಾದರೆ ಅಲ್ಲಿಂದಲೇ ಬೆಂಬಲ ಸೂಚಿಸಿದರೂ ನಡೆಯುತ್ತದೆ. ಎಂಇಎಸ್‌-ಶಿವಸೇನೆ ಕೂಡಿಕೊಂಡು ಶುಭಂ ಶೇಳಕೆಯನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ ಎಂದರು.

ಲೋಕಸಭೆ ಉಪಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಎಂಇಎಸ್‌ ಅಭ್ಯರ್ಥಿಗೆ ಕೇವಲ 50 ಸಾವಿರ ಮತ ಸಿಗಬಹುದು ಎಂದುಕೊಂಡಿದ್ದೇವು. ಆದರೆ ಶುಭಂ ಶೇಳಕೆಗೆ ಎಲ್ಲ ಕಡೆಯಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೆಲುವಿನ ಅಂಚಿಗೆ ನಮ್ಮ ಅಭ್ಯರ್ಥಿ ಬಂದಿದ್ದಾರೆ. ವಿರೋಧಿ ಗಳು ತಮ್ಮ ಅಭ್ಯರ್ಥಿ ಗೆಲ್ಲಿಸಲು ಮುಖ್ಯಮಂತ್ರಿ, ಇಡೀ ಮಂತ್ರಿ ಮಂಡಲವೇ ಪ್ರಚಾರದಲ್ಲಿ ತೊಡಗಿದೆ. ಮುಂದೆ ಪ್ರಧಾನಿ ಅವರನ್ನು ಕರೆಸಿದರೂ ಅಚ್ಚರಿ ಇಲ್ಲ. ಶುಭಂ ಶೇಳಕೆಯ ಬೆಂಬಲ ನೋಡಿ ವಿರೋಧಿ ಗಳಲ್ಲಿ ನಡುಕ ಹುಟ್ಟಿದೆ ಎಂದರು.

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ನೋಡಲ್ ಅಧಿಕಾರಿಗಳ ನಿರ್ಲಕ್ಷಕ್ಕೆ ಕಠಿಣ ಕ್ರಮ – ಅರವಿಂದ ಲಿಂಬಾವಳಿ

ನೋಡಲ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಠಿಣ ಕ್ರಮ – ಅರವಿಂದ ಲಿಂಬಾವಳಿ

ಕೋವಿಡ್ ನಿಯಂತ್ರಿಸಲು ಅಣ್ಣಮ್ಮದೇವಿ ಮೊರೆ ಹೋದ ಸಿಎಂ

ಕೋವಿಡ್ ನಿಯಂತ್ರಿಸಲು ಅಣ್ಣಮ್ಮದೇವಿ ಮೊರೆ ಹೋದ ಸಿಎಂ ಬಿಎಸ್ ವೈ

yadiyurappa

ಮೇ 10ರಿಂದ 14 ದಿನಗಳ ಕಾಲ ಕರುನಾಡು ಸ್ತಬ್ಧ: ಲಾಕ್ ಡೌನ್ ಆದೇಶ ಹೊರಡಿಸಿದ ಸಿಎಂ ಬಿಎಸ್ ವೈ

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.