Lok Sabha Elections; ಮಾ. 17ಕ್ಕೆ ಶಿವಮೊಗ್ಗದಿಂದಲೇ ಮೋದಿ ಪ್ರಚಾರ ಆರಂಭ
Team Udayavani, Mar 10, 2024, 11:32 PM IST
ಶಿವಮೊಗ್ಗ/ಬೆಂಗಳೂರು: ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಶಿವಮೊಗ್ಗದಿಂದಲೇ ಪ್ರಚಾರ ಆರಂಭಿಸಲಿದ್ದಾರೆ.
ಮಾ.17 ರಂದು ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಅಲ್ಲಮ್ಮ ಪ್ರಭು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಬೃಹತ್ ಕಾರ್ಯಕ್ರಮಕ್ಕೆ ಜಿಲ್ಲಾ ಬಿಜೆಪಿ ಸಿದ್ಧತೆ ಆರಂಭಿಸಿದ್ದು ಕಾರ್ಯಕ್ರಮದ ರೂಪುರೇಷೆ ಕುರಿತು ಸಭೆ ನಡೆಸಿದೆ. ಸಾರ್ವಜನಿಕ ಕಾರ್ಯಕ್ರಮದ ಮೊದಲು ರೋಡ್ ಶೋ ನಡೆಸಲೂ ಚಿಂತನೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೇರಳದಲ್ಲಿ ಕಾರ್ಯಕ್ರಮ ಮುಗಿಸಿ ಶಿವಮೊಗ್ಗಕ್ಕೆ ಬರಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದಾರೆ.