Udayavni Special

ಜಾತಿ-ಧರ್ಮದ ಹೆಸರಲ್ಲಿ ಮದುವೆ ಹಕ್ಕು ಕಸಿಯಲಾಗದು : ಹೈಕೋರ್ಟ್‌

Team Udayavani, Dec 1, 2020, 10:24 PM IST

“ಜಾತಿ-ಧರ್ಮದ ಹೆಸರಲ್ಲಿ ಮದುವೆ ಹಕ್ಕು ಕಸಿಯಲಾಗದು’ಹೈಕೋರ್ಟ್‌ ಅಭಿಪ್ರಾಯ

ಸಾಂದರ್ಭಿಕ ಚಿತ್ರ

ಬೆಂಗಳೂರು: “ಮದುವೆ ಹಕ್ಕನ್ನು ಜಾತಿ ಧರ್ಮದ ಹೆಸರಲ್ಲಿ ಕಸಿದುಕೊಳ್ಳಲಾಗದು’ ಎಂದು ಅಭಿಪ್ರಾಯಪಟ್ಟಿರುವ ರಾಜ್ಯ ಹೈಕೋರ್ಟ್‌, ಪ್ರಾಪ್ತ ವಯಸ್ಕರು ತಮ್ಮಿಷ್ಟದ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಭೂತ ಹಕ್ಕನ್ನು ಸಂವಿಧಾನದಲ್ಲೇ ಕೊಡಲಾಗಿದೆ ಎಂದು ಹೇಳಿದೆ.

ತಾನು ಪ್ರೀತಿಸುತ್ತಿರುವ ಯುವತಿಯನ್ನು ಅಕ್ರಮ ಬಂಧನದಲ್ಲಿರಿಸಿದ್ದು, ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಅನ್ಯಧರ್ಮದ ಯುವಕನೊಬ್ಬ ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್‌. ಸುಜಾತಾ ಹಾಗೂ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಮ್‌ ಅವರಿದ್ದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಾಪ್ತರು ತಾವು ಇಷ್ಟಪಟ್ಟ ವ್ಯಕ್ತಿಯನ್ನು ಮದುವೆಯಾಗುವುದು ಅವರ ಮೂಲಭೂತ ಹಕ್ಕು. ತಾವು ಇಷ್ಟಪಟ್ಟವರನ್ನು ಜೀವನ ಸಂಗಾತಿಯಾಗಿ ಆಯ್ಕೆ ಮಾಡಿಕೊಳ್ಳುವ ಮೂಲಭೂತ ಹಕ್ಕನ್ನು ಸಂವಿಧಾನದಲ್ಲಿ ಕೊಡಲಾಗಿದೆ. ಇಬ್ಬರು ವ್ಯಕ್ತಿಗಳ ವೈಯಕ್ತಿಕ ಸಂಬಂಧ ವಿಚಾರದಲ್ಲಿ ಕೊಡಮಾಡಲ್ಪಟ್ಟ ಈ ಸ್ವಾತಂತ್ರ್ಯವನ್ನು ಜಾತಿ ಅಥವಾ ಧರ್ಮದ ಕಾರಣದಿಂದ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಅಲ್ಲದೆ, ಸಾಫ್ಟ್ವೇರ್‌ ಎಂಜಿನಿಯರ್‌ ಆಗಿರುವ ಯುವತಿ ತನ್ನ ಜೀವನದ ಬಗ್ಗೆ ತೀರ್ಮಾನ ಕೈಗೊಳ್ಳಲು ಸಮರ್ಥಳಾಗಿದ್ದಾಳೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿದೆ.

ಪ್ರಕರಣವೇನು?
ಇಂಜಿನಿಯರಿಂಗ್‌ ವ್ಯಾಸಂಗ ಮಾಡಿರುವ ಯುವತಿಗೆ ನಾಲ್ಕು ವರ್ಷದ ಹಿಂದೆ ಮದುವೆಯಾಗಿತ್ತು. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಒಂದು ವರ್ಷದ ಹಿಂದೆ ಪತಿಯಿಂದ ವಿಚ್ಛೇದನ ಪಡೆದು, ಚಂದ್ರಾಲೇಔಟ್‌ನಲ್ಲಿ ಪಾಲಕರ ಜತೆ ನೆಲೆಸಿದ್ದಳು. ಈ ನಡುವೆ ಸಹೋದ್ಯೋಗಿ ಜತೆ ಪ್ರೇಮಾಂಕುರವಾಗಿತ್ತು. ಆತನನ್ನು ಮದುವೆಯಾಗುವ ವಿಚಾರವನ್ನು ಪಾಲಕರ ಮುಂದೆ ಪ್ರಸ್ತಾಪಿಸಿದಾಗ ಒಂದು ವರ್ಷದ ಹಿಂದೆಯಷ್ಟೇ ವಿಚ್ಛೇದನವಾಗಿದ್ದರಿಂದ ಮತ್ತೆ ಈಗಲೇ ಮದುವೆಯಾಗುವುದು ಬೇಡ ಎಂದು ಆಕೆಗೆ ಬುದ್ಧಿ ಹೇಳಿದ್ದರು. ಯುವತಿಯನ್ನು ಅಕ್ರಮ ಬಂಧನದಲ್ಲಿರಿಸಿರುವುದಾಗಿ ಯುವಕ ಹೈಕೋರ್ಟ್‌ ಮೆಟ್ಟಿಲೇರಿದ್ದ.

ಈ ಮೊದಲು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಚಂದ್ರಾಲೇಔಟ್‌ ಠಾಣೆ ಪೊಲೀಸರಿಗೆ ನಿರ್ದೇಶಿಸಿತ್ತು. ಕೋರ್ಟ್‌ ನಿರ್ದೇಶನದಂತೆ ಯುವತಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ಯುವತಿ, ಸಹೋದ್ಯೋಗಿಯನ್ನು ಪ್ರೀತಿಸುತ್ತಿದ್ದೇನೆ. ಆತನನ್ನೇ ಮದುವೆಯಾಗಲು ನಿರ್ಧರಿಸಿದ್ದೇನೆ. ಆದರೆ, ಆತ ಅನ್ಯ ಧರ್ಮಕ್ಕೆ ಸೇರಿದವನೆಂಬ ಕಾರಣದಿಂದ ಮದುವೆಗೆ ನನ್ನ ಪಾಲಕರು ಸಮ್ಮತಿ ನೀಡುತ್ತಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದಳು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ

ಲಂಚದ ಹಣ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಡಿಎಚ್ಓ ಕಛೇರಿ ವ್ಯವಸ್ಥಾಪಕ ಮನೋಹರ

ಲಂಚದ ಹಣ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಡಿಎಚ್ಓ ಕಛೇರಿ ವ್ಯವಸ್ಥಾಪಕ ಮನೋಹರ

ಅಲ್‌ಖೈದಾ ಜೊತೆ ಸೇರಿ ಹೊಸ ಉಗ್ರಸಂಘಟನೆ ಕಟ್ಟಲು ಹಖ್ಖಾನಿ ಸಂಚು?

ಅಲ್‌ಖೈದಾ ಜೊತೆ ಸೇರಿ ಹೊಸ ಉಗ್ರಸಂಘಟನೆ ಕಟ್ಟಲು ಹಖ್ಖಾನಿ ಸಂಚು?

“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಸಭಾಪತಿ ಸ್ಥಾನ ಹೊರಟ್ಟಿಗೆ: ಬಿಜೆಪಿಯಿಂದ ಪ್ರಾಣೇಶ್‌ ಉಪ ಸಭಾಪತಿ

ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್‌ ಉಪ ಸಭಾಪತಿ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ

ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ

ಸಭಾಪತಿ ಸ್ಥಾನ ಹೊರಟ್ಟಿಗೆ: ಬಿಜೆಪಿಯಿಂದ ಪ್ರಾಣೇಶ್‌ ಉಪ ಸಭಾಪತಿ

ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್‌ ಉಪ ಸಭಾಪತಿ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ

ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ

ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ

ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ

MUST WATCH

udayavani youtube

ಕೃಷಿಕ ಪ್ರತಿಭಟನೆ – ಗೊಂದಲ, ಘರ್ಷಣೆ , ವಿಶ್ಲೇಷಣೆ

udayavani youtube

ಮಂಗಳೂರು: ಜ. 30ರಿಂದ ಕಂಬಳ ನಡೆಸಲು ಅನುಮತಿ

udayavani youtube

ಕೃಷಿ ಕಾಯಿದೆ; ಕೃಷಿಕನ ಅಭಿಪ್ರಾಯ ಕ್ಕೆ ಕಿವಿಯಾಗೋಣ ಬನ್ನಿ

udayavani youtube

Udupiಯ ಜನತೆಗೆ ಕಲೆಯಿಂದ ಜನಜಾಗೃತಿ ಮೂಡಿಸಿದ ಕಲಾವಿದ KAMIL RAZA,

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

ಹೊಸ ಸೇರ್ಪಡೆ

ಪೊಲ್ಲಾರು ಕಿಂಡಿ ಅಣೆಕಟ್ಟು  ಬೇಡಿಕೆ, ಅನುದಾನ ಕೊರತೆ

ಪೊಲ್ಲಾರು ಕಿಂಡಿ ಅಣೆಕಟ್ಟು ಬೇಡಿಕೆ, ಅನುದಾನ ಕೊರತೆ

ಗುಜ್ಜಾಡಿ: ಬೇಸಗೆ ಆರಂಭಕ್ಕೆ ಮೊದಲೇ ಬತ್ತುತ್ತಿವೆ ಬಾವಿಗಳು

ಗುಜ್ಜಾಡಿ: ಬೇಸಗೆ ಆರಂಭಕ್ಕೆ ಮೊದಲೇ ಬತ್ತುತ್ತಿವೆ ಬಾವಿಗಳು

15 ವರ್ಷಗಳಿಂದ ಗ್ರಾಮಸ್ಥರಿಂದಲೇ ಹಲಗೆ ಅಳವಡಿಕೆ

15 ವರ್ಷಗಳಿಂದ ಗ್ರಾಮಸ್ಥರಿಂದಲೇ ಹಲಗೆ ಅಳವಡಿಕೆ

Untitled-1

ವಿದ್ಯುತ್‌ ಬಳಕೆಯಲ್ಲಿ ಸ್ವಾವಲಂಬನೆಯ ಹೆಗ್ಗಳಿಕೆ

Untitled-1

ಹುಲಿ ಕಂಡು ಕುಸಿದು ಬಿದ್ದ ವಿದ್ಯಾರ್ಥಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.